ಮಂಗಳವಾರ, ಅಕ್ಟೋಬರ್ 20, 2020
25 °C

ಗೋಮಾಳದಲ್ಲಿ ಮರಗಿಡ ನಾಶ: ಸರ್ಕಾರಕ್ಕೆ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೋಲಾರ ಜಿಲ್ಲೆಯ ಗುಂಡೇನಹಳ್ಳಿ ಬೆಟ್ಟದಲ್ಲಿನ  37 ಎಕರೆ ಗೋಮಾಳದಲ್ಲಿ ಈ ಹಿಂದಿನಂತೆ ಗಿಡ ನೆಡಲು ನಿರ್ದೇಶನ ನೀಡಬೇಕು ಎಂದು ಕೋರಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.

‘ಅಕ್ರಮ ಗಣಿಗಾರಿಕೆ ನಡೆಸಿದವರಿಗೆ ವಿಧಿಸಲಾದ ₹106 ಕೋಟಿ ದಂಡ ವಸೂಲಿ ಮಾಡದೆ ಅವರ ಪರವಾನಗಿಯನ್ನು ಅಧಿಕಾರಿಗಳು ನವೀಕರಿಸಿದ್ದಾರೆ’ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ರವೀಂದ್ರ ಮತ್ತು ಇತರ ನಾಲ್ವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ, ಸರ್ಕಾರಕ್ಕೆ ನೋಟಿಸ್ ನೀಡಲು ಆದೇಶಿಸಿತು.

‘‌45.16 ಎಕರೆ ಸರ್ಕಾರಿ ಭೂಮಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಲಾಗಿದೆ. ಅದರಲ್ಲಿ ಸುಮಾರು 37 ಎಕರೆಯಷ್ಟು ಜಾಗದಲ್ಲಿ ಮರ ಗಿಡಗಳಿದ್ದವು. ಈಗ ಅದು ಸಂಪೂರ್ಣ ನಾಶವಾಗಿದೆ. ಸುಮಾರು 9,500 ಮರಗಳು ನಾಶವಾದ ನಂತರವೂ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

‘ಸರ್ಕಾರಿ ಭೂಮಿ ಒತ್ತುವರಿ ಮಾಡಿದವರು ಮತ್ತು ಅದಕ್ಕೆ ಅವಕಾಶ ಕಲ್ಪಿಸಿದ ಸರ್ಕಾರಿ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ತನಿಖೆಗೆ ನಿರ್ದೇಶನ ನೀಡಬೇಕು’ ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು