ಬೆಂಗಳೂರು: ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಚುನಾವಣೆ ಹಿನ್ನೆಲೆಯಲ್ಲಿ ಇದೇ 22ಕ್ಕೆ ಮತದಾರರ ಅಂತಿಮ ಪಟ್ಟಿ ಪ್ರಕಟಿಸುವ ನಿರೀಕ್ಷೆ ಇದೆ’ ಎಂದು ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ಗೆ ತಿಳಿಸಿದೆ.

ಬಿಬಿಎಂಪಿ ವಾರ್ಡ್ ಮರು ವಿಂಗಡಣೆ ಮತ್ತು ಮೀಸಲು ಅಂತಿಮ ಅಧಿಸೂಚನೆ ಪ್ರಶ್ನಿಸಿ ಸಲ್ಲಿಸಲಾಗಿರುವ ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಬಿಬಿಎಂಪಿ ಚುನಾವಣಾ ವೇಳಾಪಟ್ಟಿಗೆ ಸಂಬಂಧಿಸಿದಂತೆ ನ್ಯಾಯಪೀಠದ ಪ್ರಶ್ನೆಗೆ ಉತ್ತರಿಸಿದಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ, ‘ಮತದಾರರ ಅಂತಿಮ ಪಟ್ಟಿಯನ್ನು ಇದೇ 22ಕ್ಕೆ ಪ್ರಕಟಿಸುವ ಸಾಧ್ಯತೆಯಿದೆ. ನಂತರ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗುವುದು’ ಎಂದು ವಿವರಿಸಿದರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ವಾರ್ಡ್ ಮರು ವಿಂಗಡಣೆ ಮತ್ತು ಮೀಸಲು ಅಂತಿಮ ಅಧಿಸೂಚನೆಗೆ ತಡೆ ನೀಡುವಂತೆ ಕೋರಿದ ಮಧ್ಯಂತರ ಮನವಿ ಪುರಸ್ಕರಿಸಲು ನ್ಯಾಯಪೀಠ ನಿರಾಕರಿಸಿತು.

‘ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಿದ ನಂತರವೇ ಚುನಾವಣಾ ವೇಳಾಪಟ್ಟಿ ಹೊರಡಿಸಲಾಗುವುದು ಎಂದು ಆಯೋಗ ತಿಳಿಸಿದೆ. ಆದ್ದರಿಂದ, ಇದೇ 22ರೊಳಗೆ ವಿಚಾರಣೆಯನ್ನು ಪೂರ್ಣಗೊಳಿಸಲಾಗುವುದು’ ಎಂದು ವಿಚಾರಣೆಯನ್ನು ಇದೇ 8ಕ್ಕೆ ವಿಚಾರಣೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.