ಕಬ್ಬನ್ ಪಾರ್ಕ್ನಲ್ಲಿ ವಾಹನ ನಿರ್ಬಂಧ ಅಸಾಧ್ಯ: ಹೈಕೋರ್ಟ್ಗೆ ಸರ್ಕಾರ ಮಾಹಿತಿ

ಬೆಂಗಳೂರು: ಕಬ್ಬನ್ ಪಾರ್ಕ್ ಆವರಣದಲ್ಲಿ ವಾಹನ ಸಂಚಾರ ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಸಲ್ಲಿಸಿದ್ದ ಅಫಿಡವಿಟ್ ಪರಿಗಣಿಸಿದ ನ್ಯಾಯಾಲಯ, ಈ ಸಂಬಂಧದ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ಕೈಬಿಟ್ಟಿದೆ.
‘ಕಬ್ಬನ್ ಪಾರ್ಕ್ನಲ್ಲಿ ಸಂಚಾರ ತಪ್ಪಿಸಲು ಸಾಧ್ಯವಿಲ್ಲ. ಆದ್ದರಿಂದ ಮೊದಲಿನಂತೆ ಮುಂದುವರಿಸಬೇಕು ಎಂಬ ತೀರ್ಮಾನವನ್ನು 2020ರ ನವೆಂಬರ್ 11ರಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ’ ಎಂದು ಅಫಿಡವಿಟ್ನಲ್ಲಿ ಸರ್ಕಾರ ತಿಳಿಸಿದೆ.
‘ನಗರ ಭೂಸಾರಿಗೆ ನಿರ್ದೇಶನಾಲಯದ(ಡಲ್ಟ್) ಶಿಫಾರಸನ್ನು ಸರ್ಕಾರ ಪರಿಗಣಿಸಿಲ್ಲ’ ಎಂದು ಅರ್ಜಿದಾರರು ದೂರಿದ್ದರು. ಈ ಹಿಂದಿನ ವಿಚಾರಣೆ ವೇಳೆ ಡಲ್ಟ್ ಶಿಫಾರಸು ಪರಿಗಣಿಸುವಂತೆ ಪೀಠ ನಿರ್ದೇಶನ ನೀಡಿತ್ತು. ನ್ಯಾಯಾಲಯದ ಆದೇಶ ಪಾಲಿಸಿಲ್ಲ ಎಂಬ ಕಾರಣಕ್ಕೆ ಕಬ್ಬನ್ ಪಾರ್ಕ್ ನಡಿಗೆದಾರರ ಸಂಘ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು.
ವಿಚಾರಣೆ ಕೈಬಿಟ್ಟ ಪೀಠ, ‘ಈ ನಿರ್ಧಾರ ಅರ್ಜಿದಾರರಿಗೆ ತೃಪ್ತಿ ಎನಿಸದಿದ್ದರೆ ಕಾನೂನಿನ ಪ್ರಕಾರ ಮುಂದುವರಿಯಲು ಸ್ವಾತಂತ್ರ್ಯವಿದೆ’ ಎಂದು ಹೇಳಿತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.