ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸಿಟಿ: ನಿಮ್ಹಾನ್ಸ್ ಪ್ರತಿವಾದಿ ಮಾಡಲು ಸೂಚನೆ

Last Updated 2 ಸೆಪ್ಟೆಂಬರ್ 2021, 22:37 IST
ಅಕ್ಷರ ಗಾತ್ರ

ಬೆಂಗಳೂರು: ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಪ್ರಯತ್ನಿಸುವ ಮಾನಸಿಕ ಅಸ್ವಸ್ಥರಿಗೆ ಎಲೆಕ್ಟ್ರೋ ಕನ್ವಲ್ಸಿವ್
ಚಿಕಿತ್ಸೆ (ಇಸಿಟಿ) ನೀಡಲು ಅನುಮತಿ ಕೋರಿರುವ ಅರ್ಜಿಯಲ್ಲಿ ನಿಮ್ಹಾನ್ಸ್ ಸಂಸ್ಥೆಯನ್ನೂ ಪ್ರತಿವಾದಿಯಾಗಿ ಮಾಡುವಂತೆ ಅರ್ಜಿದಾರರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಹುಬ್ಬಳ್ಳಿಯ ನರರೋಗ ತಜ್ಞ ಡಾ. ವಿನೋದ್ ಜಿ. ಕುಲಕರ್ಣಿ ಈ ಅರ್ಜಿ ಸಲ್ಲಿಸಿದ್ದು, ‘ರೋಗಿಗಳಲ್ಲಿ ಆತ್ಮಹತ್ಯೆ ಆಲೋಚನೆಗಳನ್ನು ತೆಗೆದು ಹಾಕಬಹುದಾದ ಈ ಚಿಕಿತ್ಸೆಯನ್ನು ಮಾನಸಿಕ ಆರೋಗ್ಯ ಕಾಯ್ದೆ 2017ರ ಸೆಕ್ಷನ್ 94(3)ರ ಅಡಿಯಲ್ಲಿ ನಿರ್ಬಂಧಿಸಲಾಗಿದೆ. ಮಾನಸಿಕವಾಗಿ ತೀರಾ ಖಿನ್ನರಾದವರಿಗೆ ಈ ಚಿಕಿತ್ಸೆ ನೀಡಿ ಅವರ ಜೀವ ಉಳಿಸಬಹುದು’ ಎಂದು ಪ್ರತಿಪಾದಿಸಿದ್ದಾರೆ.

ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮುರ್ತಿ ಸತೀಶ್‌ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ, ಈ ವಿಷಯದಲ್ಲಿ ತಜ್ಞರ ಸಲಹೆ ಪಡೆಯಬೇಕಾಗಿದೆ. ಆದ್ದರಿಂದ ನಿಮ್ಹಾನ್ಸ್ ಸಂಸ್ಥೆಯನ್ನು ಪ್ರತಿವಾದಿಯಾಗಿ ಮಾಡುವಂತೆ ಸೂಚಿಸಿತು. ವಿಚಾರಣೆಯನ್ನು ಅಕ್ಟೋಬರ್ 27ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT