ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೋಧನಾ ಶುಲ್ಕ: ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್

Last Updated 10 ಮಾರ್ಚ್ 2021, 21:25 IST
ಅಕ್ಷರ ಗಾತ್ರ

ಬೆಂಗಳೂರು: ‘ಕೇಂದ್ರಿಯ ಪಠ್ಯಕ್ರಮದ ಶಾಲೆಗಳಲ್ಲಿ ಬೋಧನಾ ಶುಲ್ಕದ ಪ್ರಮಾಣ ಇಳಿಸಬೇಕೆಂಬ ಬಲವಂತದ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳಬಾರದು’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ಕಳೆದ ವರ್ಷಕ್ಕಿಂತ ಕಡಿಮೆ ಶುಲ್ಕ ಪಾವತಿಸುವ ಪೋಷಕರ ಮನವಿಗಳನ್ನೂ ಪರಿಗಣಿಸುವಂತೆ ಆಡಳಿತ ಮಂಡಳಿಗಳಿಗೆ ನ್ಯಾಯಮೂರ್ತಿ ಆರ್. ದೇವದಾಸ್‌ ಅವರಿದ್ದ ಪೀಠ ತಿಳಿಸಿತು. ವಿಚಾರಣೆಯನ್ನು ಮಾ.24ಕ್ಕೆ ಮುಂದೂಡಿತು.

ಶೇ 70ರಷ್ಟು ಶುಲ್ಕ ಮಾತ್ರ ಪಡೆಯಬೇಕು ಎಂದು 2021ರ ಜನವರಿ 29ರಂದು ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಈ ಆದೇಶ ಪ್ರಶ್ನಿಸಿ ಶಾಲಾ ಆಡಳಿತ ಮಂಡಳಿಗಳು ಮತ್ತು ಸಂಘಗಳು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದವು.

ಆನ್‌ಲೈನ್ ತರಗತಿಗಳು ನಡೆಯುತ್ತಿರುವ ಕಾರಣ ಬೋಧನಾ ವೆಚ್ಚ ಹೆಚ್ಚಾಗಿದೆ ಎಂದು ಅರ್ಜಿದಾರರು ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT