ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾದರಾಯನಪುರ ಪ್ರಕರಣ: ಹೈಕೋರ್ಟ್ ಕಳವಳ

Last Updated 21 ಏಪ್ರಿಲ್ 2020, 15:41 IST
ಅಕ್ಷರ ಗಾತ್ರ

ಬೆಂಗಳೂರು:ಪಾದರಾಯನಪುರ ಪ್ರಕರಣಕ್ಕೆ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ‘ಈ ರೀತಿಯ ಬೆಳವಣಿಗೆ ನಡೆದರೆ ವೈದ್ಯರು, ಆರೋಗ್ಯ ಕಾರ್ಯಕರ್ತರು ಹಾಗೂ ಪೊಲೀಸರು ತಮ್ಮ ಕರ್ತವ್ಯ ನಿರ್ವಹಣೆ ಮಾಡುವುದಾದರೂ ಹೇಗೆ’ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ.

‘ಪ್ರಕರಣದ ಆರೋಪಿಗಳ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿ ದೂರು ದಾಖಲಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು’ಎಂದು ಕೋರಿ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಜಿ‌.ಆರ್. ಮೋಹನ್ ಘಟನೆ ಬಗ್ಗೆ ನ್ಯಾಯಪೀಠಕ್ಕೆ ವಿವರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ವೈದ್ಯರು, ಆರೋಗ್ಯ ಹಾಗೂ ಆಶಾ ಕಾರ್ಯಕರ್ತರ ಭದ್ರತೆಗೆ ಯಾವ ಮಾರ್ಗಸೂಚಿ ರೂಪಿಸಲಾಗಿದೆ, ಅವರಿಗೆ ಸಶಸ್ತ್ರ ಭದ್ರತೆ ನೀಡಲು ಸಾಧ್ಯವೇ’ಎಂದು ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿತು.

‘ಇಂತಹ ಘಟನೆ ಮರುಕಳಿಸದಂತೆ ಯಾವ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಬಗ್ಗೆ ವರದಿ ಸಲ್ಲಿಸಿ’ಎಂದು ನಿರ್ದೇಶಿಸಿ ವಿಚಾರಣೆಯನ್ನು ಇದೇ 24ಕ್ಕೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT