ಬೆಂಗಳೂರು: ಸ್ಥಿರಾಸ್ತಿಗೆ ಸಂಬಂಧಿಸಿದ ಕಂದಾಯ ದಾಖಲೆಗಳನ್ನು ಬದಲಿಸುವುದಕ್ಕೆ ಭೂ ಮಾಲೀಕನಿಂದ ₹ 10 ಸಾವಿರ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲೆಯ ಬೆಳಗಟ್ಟ ಗ್ರಾಮ ಪಂಚಾಯಿತಿ ಪಿಡಿಒ ಸುರೇಶ್ ಹೆಬ್ಬಾಗಿಲು ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಈ ಸಂಬಂಧ ಸುರೇಶ್ ಹೆಬ್ಬಾಗಿಲು, ‘ನನ್ನ ವಿರುದ್ಧ ದಾಖಲಿಸಿರುವ ಎಫ್ಐಆರ್ ರದ್ದುಪಡಿಸಬೇಕು’ ಎಂದು ಕೋರಲಾಗಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ.

ಲಭ್ಯವಿರುವ ದಾಖಲೆಗಳನ್ನು ಪರಿಶೀಲಿಸಿದರೆ ಸುರೇಶ್ ಹೆಬ್ಬಾಗಿಲು ದೂರುದಾರರಿಗೆ ಲಂಚಕ್ಕೆ ಬೇಡಿಕೆಯಿಟ್ಟ ಹಾಗೂ ಅವರಿಂದ ಲಂಚ ಪಡೆದ ಆರೋಪದಲ್ಲಿ ಸತ್ಯಾಂಶವಿದೆ ಎಂಬುದು ಮೇಲ್ನೋಟಕ್ಕೆ ತಿಳಿದು ಬರುತ್ತದೆ. ಪ್ರಕರಣದ ತನಿಖೆ ಮುಂದುವರಿಯುವುದು ಅತ್ಯಂತ ಅಗತ್ಯವಿದೆ. ಆದ್ದರಿಂದ, ಎಫ್ಐಆರ್ ರದ್ದುಪಡಿಸಲು ಯಾವುದೇ ಸಕಾರಣ ಇಲ್ಲ’ ಎಂಬ ಅಭಿಪ್ರಾಯದೊಂದಿಗೆ ನ್ಯಾಯಪೀಠ ಅರ್ಜಿ ವಜಾಗೊಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.