ಶುಕ್ರವಾರ, ಆಗಸ್ಟ್ 14, 2020
27 °C

ಕೋವಿಡ್-19 ಕಾರಣಕ್ಕೆ ಜಾಮೀನು ಕೋರಿಕೆ: ಅರ್ಜಿ ತಿರಸ್ಕರಿಸಿದ ಹೈಕೋರ್ಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 'ಕೋವಿಡ್-19 ಇರುವ ಕಾರಣ ವಿಚಾರಣಾ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಶೀಘ್ರ ಮುಗಿಯುವುದಿಲ್ಲ. ಈ ಅಂಶವನ್ನು ಪರಿಗಣಿಸಿ ಜಾಮೀನು ನೀಡಬೇಕು' ಎಂದು ಕೊಲೆ ಪ್ರಕರಣದ ಆರೋಪಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

ಆರೋಪಿ ಹರೀಶ್ ರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ, 'ಅರ್ಜಿದಾರರ ವಾದ ಸಮರ್ಥನೀಯವಾಗಿಲ್ಲ' ಎಂದು ಹೇಳಿದೆ.

ಕೊಲೆ,‌ ಕೊಲೆ ಯತ್ನ, ಜೀವ ಬೆದರಿಕೆ ಮತ್ತು ಅಕ್ರಮ ಕೂಟ ಸೇರಿದಂತೆ ವಿವಿಧ ಆರೋಪಗಳಡಿ ಉಡುಪಿಯ ಬ್ರಹ್ಮಾವರ ವೃತ್ತದ ಕೋಟ ಠಾಣಾ ಪೊಲೀಸರು ಹರೀಶ್ ರೆಡ್ಡಿ ವಿರುದ್ಧ ಪ್ರಕರಣ ದಾಖಲಿಸಿದ್ದು, ಅವರು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು