ಮಂಗಳವಾರ, ಮಾರ್ಚ್ 28, 2023
32 °C

ಪ್ರತಿಮೆಯಿಂದ ಸಂಚಾರಕ್ಕೆ ಅಡ್ಡಿ: ಪರಿಶೀಲನೆಗೆ ಹೈಕೋರ್ಟ್ ನಿರ್ದೇಶನ

‍ಪ್ರಕಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್ ಕಾರ್ಖಾನೆ ಜಂಕ್ಷನ್‌ನಲ್ಲಿ ಬಿಬಿಎಂಪಿ ಪ್ರತಿಷ್ಠಾಪಿಸಿರುವ ಪ್ರತಿಮೆಗಳಿಂದ ಸಂಚಾರಕ್ಕೆ ತೊಂದರೆ ಆಗುತ್ತಿದೆಯೇ ಎಂಬುದನ್ನು ಪರಿಶೀಲಿಸಿ ವರದಿ ನೀಡಲು ಸಂಚಾರ ಪೊಲೀಸ್‌ ವಿಭಾಗದ ಹಿರಿಯ ಅಧಿಕಾರಿಯನ್ನು ನೇಮಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

‘ಜಗಜ್ಯೋತಿ ಬಸವೇಶ್ವರ, ಶಿವಕುಮಾರಸ್ವಾಮೀಜಿ ಮತ್ತು ರಾಜ್‌ಕುಮಾರ್ ಅವರ ಪ್ರತಿಮೆಗಳನ್ನು ಜಂಕ್ಷನ್‌ನಲ್ಲಿ ಪ್ರತಿಷ್ಠಾಪಿಸಲಾಗಿದೆ. ಇದು ಹೆದ್ದಾರಿ ನಿಯಮಗಳ ಉಲ್ಲಂಘನೆ ಮತ್ತು ಸಂಚಾರ ದಟ್ಟಣೆಗೆ ಕಾರಣವಾಗಲಿದೆ’ ಎಂದು ವಕೀಲ ಎ.ವಿ. ಅಮರನಾಥನ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

‘ಪ್ರತಿಮೆಗಳನ್ನು ಪ್ರತಿಷ್ಠಾಪಿಸಿರುವ ಜಾಗ ಉದ್ಯಾನಕ್ಕೆ ಸೇರಿದ್ದು ಎಂಬುದಕ್ಕೆ ಯಾವುದೇ ದಾಖಲೆಗಳು ಇಲ್ಲ. ಸಂಚಾರ ದಟ್ಟಣೆಗೆ ಕಾರಣವಾಗಲಿದೆಯೇ ಎಂಬುದನ್ನಷ್ಟೇ ಪರಿಶೀಲನೆ ನಡೆಸಬೇಕಿದೆ’ ಎಂದು ಪೀಠ ಹೇಳಿತು.

‘ಸರ್ಕಾರ ನೇಮಿಸುವ ಅಧಿಕಾರಿಯು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಫಿಡವಿಟ್ ಸಲ್ಲಿಸಬೇಕು‍’ ಎಂದು ತಿಳಿಸಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು