ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಹನ: ಅನಧಿಕೃತ ನಾಮಫಲಕ ಸಲ್ಲ

Last Updated 3 ಜನವರಿ 2020, 22:27 IST
ಅಕ್ಷರ ಗಾತ್ರ

ಬೆಂಗಳೂರು: ‘ಜನಪ್ರತಿನಿಧಿಗಳು, ಸರ್ಕಾರೇತರ ವಾಹನಗಳ ಮೇಲೆ ತಮ್ಮ ಹೆಸರು, ಹುದ್ದೆ ಹಾಗೂ ಸರ್ಕಾರಿ ಲಾಂಛನ, ಚಿಹ್ನೆ ಸೇರಿದಂತೆ ಯಾವುದೇ ಮಾಹಿತಿಗಳನ್ನು ಒಳಗೊಂಡ ನಾಮಫಲಕ ಅಳವಡಿಸಬಾರದು’ ಎಂದು ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ.

ನಾಮಫಲಕ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ನ್ಯಾಯಮೂರ್ತಿ ಆರ್. ದೇವದಾಸ್‌ ಅವರಿದ್ದ ಏಕ
ಸದಸ್ಯ ನ್ಯಾಯಪೀಠ ಈ ಸಂಬಂಧ ಸ್ವಯಂ ಪ್ರೇರಿತ ಆದೇಶ ನೀಡಿದ್ದು, ‘ಗ್ರಾಮ ಪಂಚಾಯಿತಿ ಸದಸ್ಯರಿಂದ ಲೋಕಸಭೆ ಸದಸ್ಯರವರೆಗೂ ಎಲ್ಲಾ ಹಾಲಿ ಹಾಗೂ ಮಾಜಿ ಜನಪ್ರತಿನಿಧಿಗಳು ತಮ್ಮ ಖಾಸಗಿ ವಾಹನಗಳ ಮೇಲೆ ಯಾವುದೇ ರೀತಿಯ ನಾಮಫಲಕ ಅಳವಡಿಸಬಾರದು’ ಎಂದು ತಾಕೀತು ಮಾಡಿದೆ.

‘ರಾಜ್ಯ ಮತ್ತು ಕೇಂದ್ರ ಸರ್ಕಾರಿ ಸಂಸ್ಥೆಗಳು, ಅರೆ ನ್ಯಾಯಿಕ ಸಂಸ್ಥೆಗಳ ಹೆಸರು, ಲಾಂಛನ-ಚಿಹ್ನೆಗಳನ್ನು ಹೋಲುವಂತಹ ಫಲಕಗಳನ್ನು ಖಾಸಗಿ ಸಂಘಟನೆಗಳು, ಸಂಘ-ಸಂಸ್ಥೆಗಳು, ಕಂಪನಿಗಳು ತಮ್ಮ ವಾಹನಗಳಿಗೆ ಅಳವಡಿಸಬಾರದು. ಈ ನಿಯಮ ಉಲ್ಲಂಘಿಸಿದ ವಾಹನಗಳ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಹಾಗೂ ಅಂತಹ ಫಲಕಗಳನ್ನು ತೆರವುಗೊಳಿಸಿ ಇದೇ 22ರಂದು ವರದಿ ಸಲ್ಲಿಸಬೇಕು’ ಎಂದು ನ್ಯಾಯಪೀಠ, ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಪ್ರಸನ್ನ ದೇಶಪಾಂಡೆ ಅವರಿಗೆ ನಿರ್ದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT