ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ, ಉದ್ಯಾನದಲ್ಲಿ ಪ್ರತಿಮೆ: ವಿವರ ಸಲ್ಲಿಸಲು ಹೈಕೋರ್ಟ್‌ ನಿರ್ದೇಶನ

Last Updated 24 ಆಗಸ್ಟ್ 2020, 20:19 IST
ಅಕ್ಷರ ಗಾತ್ರ

ಬೆಂಗಳೂರು: ಮೈಸೂರು ಸ್ಯಾಂಡಲ್ ಸಾಬೂನು ಕಾರ್ಖಾನೆ ಜಂಕ್ಷನ್‌ನಲ್ಲಿ ಅಳವಡಿಸಿರುವ ಮೂರು ಪ್ರತಿಮೆಗಳು ಉದ್ಯಾನ ಮತ್ತು ರಸ್ತೆ ಜಾಗದಲ್ಲಿ ಇವೆ ಎಂಬುದಕ್ಕೆ ಹೆಚ್ಚಿನ ವಿವರ ಸಲ್ಲಿಸುವಂತೆ ಅರ್ಜಿದಾರರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

‘ಹೆದ್ದಾರಿಗೆ ಹೊಂದಿಕೊಂಡಂತೆ ನಿಯಮಗಳನ್ನು ಉಲ್ಲಂಘಿಸಿ ಜಗಜ್ಯೋತಿ ಬಸವೇಶ್ವರ, ಶಿವಕುಮಾರಸ್ವಾಮೀಜಿ, ರಾಜ್‌ಕುಮಾರ್ ಅವರ ಪ್ರತಿಮೆಗಳನ್ನು ಪ್ರತಿಷ್ಠಾಪಿಸಲಾಗಿದೆ’ ಎಂದು ವಕೀಲ ಎ.ವಿ. ಅಮರನಾಥನ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

‘ವಾಹನ ಸಂಚಾರಕ್ಕೆ ಯೋಗ್ಯವಾಗದ ಮಧ್ಯದ ಪ್ರದೇಶದಲ್ಲಿ ಪ್ರತಿಮೆಗಳನ್ನು ಪ್ರತಿಷ್ಠಾಪಿಸಲಾಗಿದೆಯೇ ಹೊರತು ರಸ್ತೆ ಅಥವಾ ಉದ್ಯಾನದಲ್ಲಿ ಅಲ್ಲ. ಪ್ರತಿಮೆಗಳನ್ನು ಅಳವಡಿಸುವ ಕೆಲಸ ಪೂರ್ಣಗೊಂಡಿದ್ದು, ಅನಾವರಣಕ್ಕೆ ಸಿದ್ಧವಾಗಿವೆ’ಎಂದುನ್ಯಾಯಾಲಯಕ್ಕೆ ಬಿಬಿಎಂಪಿ ಸೋಮವಾರ ವಿವರಣೆ ಸಲ್ಲಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT