ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಕುದುರೆ ರೇಸ್‌ಗೆ ಹೈಕೋರ್ಟ್ ತಡೆ

Published 22 ಜೂನ್ 2024, 15:56 IST
Last Updated 22 ಜೂನ್ 2024, 15:56 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ (ಬಿಟಿಸಿ) ಕುದುರೆ ಓಟದ ಪಂದ್ಯಾವಳಿ ಆಯೋಜಿಸಲು ಅನುಮತಿ ನೀಡಿದ್ದ ಏಕಸದಸ್ಯ ನ್ಯಾಯಪೀಠದ ಮಧ್ಯಂತರ ಆದೇಶಕ್ಕೆ ವಿಭಾಗೀಯ ನ್ಯಾಯಪೀಠ ತಡೆ ವಿಧಿಸಿದೆ.

ಈ ಸಂಬಂಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠ ಶನಿವಾರ ಪ್ರಕಟಿಸಿತು.

‘ಮೇಲ್ಮನವಿ ಇತ್ಯರ್ಥವಾಗುವ ತನಕ ಬಿಟಿಸಿ ಯಾವುದೇ ಆನ್‌ ಕೋರ್ಸ್ (ಬೆಂಗಳೂರಿನಲ್ಲಿ ಪಂದ್ಯಾವಳಿ) ಅಥವಾ ಆಫ್ ಕೋರ್ಸ್ (ಬೆಂಗಳೂರು ಹೊರತುಪಡಿಸಿದ ನಗರಗಳಲ್ಲಿ) ಪಂದ್ಯಾವಳಿ ನಡೆಸುವಂತಿಲ್ಲ’ ಎಂದು ನಿರ್ಬಂಧ ವಿಧಿಸಿ ಆದೇಶಿಸಿತು.

ಶನಿವಾರ (ಜೂನ್ 21) ಮಧ್ಯಾಹ್ನ 1.30 ರಿಂದ ಆರಂಭವಾಗಬೇಕಿದ್ದ ರೇಸ್ ಪಂದ್ಯಾವಳಿಗಳು ಇದರಿಂದಾಗಿ ಅಮಾನತುಗೊಂಡಂತಾಗಿದೆ. ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ ಶೆಟ್ಟಿ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT