ಶುಕ್ರವಾರ, ಜೂನ್ 5, 2020
27 °C

ಜೂನ್ 1ರಿಂದ ಸೀಮಿತವಾಗಿ ಕೋರ್ಟ್ ಕಾರ್ಯಾರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಹೈಕೋರ್ಟ್‌ನ ಮೂರೂ ಪೀಠಗಳು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಹಾಗೂ ವಿಚಾರಣಾ ನ್ಯಾಯಾಲಯಗಳು ಜೂನ್ 1ರಿಂದ ಸೀಮಿತ ವ್ಯಾಪ್ತಿಯಲ್ಲಿ ಕಾರ್ಯಾರಂಭ ಮಾಡಲಿವೆ.

ಹೈಕೋರ್ಟ್ ಬೆಂಗಳೂರು ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರ್ಗಿ ಪೀಠಗಳು, ಸೆಷನ್ಸ್ ಮತ್ತು ಮ್ಯಾಜಿಸ್ಟ್ರೇಟ್ ಕೋರ್ಟ್‌ಗಳು ಕೊರೊನಾ ತಡೆಯ ಮುನ್ನೆಚ್ಚರಿಕೆ ಕ್ರಮಗಳ ಪಾಲನೆಯೊಂದಿಗೆ ಕಾರ್ಯ ನಿರ್ವಹಿಸಲಿವೆ.

ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಹೈಕೋರ್ಟ್‌ನ ಪೂರ್ಣಪೀಠದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ರಿಜಿಸ್ಟ್ರಾರ್ ಜನರಲ್ ರಾಜೇಂದ್ರ ಬದಾಮಿಕರ ಶನಿವಾರ ಹೊರಡಿಸಿರುವ ನೋಟಿಸ್‌ನಲ್ಲಿ ತಿಳಿಸಿದ್ದಾರೆ.

ಕಲಾಪ ಆರಂಭಕ್ಕೆ ಸಂಬಂಧಿಸಿದ ನಿರ್ದಿಷ್ಟ ಮಾರ್ಗಸೂಚಿಗಳನ್ನು ಇದೇ 26ರಂದು ಹೈಕೋರ್ಟ್‌ನ ಅಧಿಕೃತ ವೆಬ್ ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.

ಮುಖ್ಯ ನ್ಯಾಯಮೂರ್ತಿಗಳು ಇದೇ 27ರಂದು ಸಂಜೆ ರಾಜ್ಯ ವಕೀಲರ ಪರಿಷತ್ ಮತ್ತು ರಾಜ್ಯದ ಎಲ್ಲ ವಕೀಲರ ಸಂಘದ ಪದಾಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಿದ್ದು, ಸೀಮಿತ ರೀತಿಯಲ್ಲಿ ಕೋರ್ಟ್ ಕಲಾಪ ನಡೆಸಲು ವಕೀಲ ವೃಂದದ ಸಹಕಾರ ಕೋರಲಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು