7

ಕಸ ವಿಲೇವಾರಿ‌: ಬಿಬಿಎಂಪಿ ವಿರುದ್ದ ಹೈಕೋರ್ಟ್ ಗರಂ

Published:
Updated:

ಬೆಂಗಳೂರು: ‘ಬೆಂಗಳೂರಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿಜವಾಗಿಯೂ ಕೆಲಸ ಮಾಡುತ್ತಿದೆಯಾ’ ಎಂದು ಹೈಕೋರ್ಟ್ ಪ್ರಶ್ನಿಸಿದೆ.

ಕಸ ನಿರ್ವಹಣೆ ಟೆಂಡರ್ ರದ್ದುಗೊಳಿಸಿದ್ದ ಬಿಬಿಎಂಪಿ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಕುರಿತು ಬಿಬಿಎಂಪಿ ಪರ ವಕೀಲರನ್ನು ಪ್ರಶ್ನಿಸಿದೆ.

‘ಸ್ವಚ್ಚತೆ ಪಾಲಿಕೆಯ ಪ್ರಮುಖ ಆದ್ಯತೆ ಆಗಬೇಕು. ಕಸ ನಿರ್ವಹಣೆ, ವಿಲೇವಾರಿ ಕೇವಲ ಬಿಬಿಎಂಪಿಯ ಜವಾಬ್ದಾರಿಯೇ’ ಎಂದೂ ನ್ಯಾಯಪೀಠ ಅತೃಪ್ತಿ ವ್ಯಕ್ತಪಡಿಸಿದೆ.

ಟೆಂಡರ್‌ಗೆ ಬ್ಯಾಂಕ್ ಗ್ಯಾರಂಟಿ ನೀಡಿಲ್ಲ ಎಂದು ಕಾರಣಕ್ಕೆ ಪಾಲಿಕೆ ಟೆಂಡರ್ ಅನ್ನು ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಮಾತಾ ಓವರ್ಸೀಸ್ ಪ್ರೈ.ಲಿ ಕಂಪನಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. 

ಅರ್ಜಿದಾರನಿಗೆ ದಂಡ
ಬೆಂಗಳೂರು: ಉಪ ಮುಖ್ಯಮಂತ್ರಿ ಹುದ್ದೆ ಅಸಾಂವಿಧಾನಿಕ ಎಂದು ಆಕ್ಷೇಪಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ವಜಾಗೊಳಿಸಿರುವ ಹೈಕೋರ್ಟ್ ಅರ್ಜಿದಾರರಿಗೆ ₹10 ಸಾವಿರ ದಂಡ ವಿಧಿಸಿದೆ.

ಈ ಕುರಿತಂತೆ ಅರ್ಜಿದಾರರಾದ ಪುತ್ತೂರಿನ ವಿವೇಕಾನಂದ ಕಾಲೇಜಿನ ಪ್ರೊಫೆಸರ್ ಶೇಖರ ಅಯ್ಯರ್ ಅವರು ದಂಡದ ಮೊತ್ತವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ 30 ದಿನಗಳ ಒಳಗೆ ನೀಡಬೇಕು ಎಂದು ಆದೇಶಿಸಲಾಗಿದೆ.

ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿತು.

'ಪಿಐಎಲ್‌ಗಳ ದುರುಪಯೋಗ ಆಗುತ್ತಿದೆ. ನಿಜವಾದ ಕಾರಣಕ್ಕೆ ಪಿಐಎಲ್ ಸಲ್ಲಿಕೆ ಆಗುತ್ತಿಲ್ಲ' ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !