ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೈಗಾರಿಕೋದ್ಯಮ, ಶಿಕ್ಷಣ ರಂಗಗಳ ಸಹಭಾಗಿತ್ವಕ್ಕೆ ಉನ್ನತ ಸಮಿತಿ: ಎಂ.ಬಿ. ಪಾಟೀಲ

Published 8 ಸೆಪ್ಟೆಂಬರ್ 2023, 20:46 IST
Last Updated 8 ಸೆಪ್ಟೆಂಬರ್ 2023, 20:46 IST
ಅಕ್ಷರ ಗಾತ್ರ

ಬೆಂಗಳೂರು: ‘ಕೈಗಾರಿಕೋದ್ಯಮ ಮತ್ತು ಶಿಕ್ಷಣ ರಂಗಗಳ ಸಹಭಾಗಿತ್ವಕ್ಕೆ ಸಚಿವರ ಮಟ್ಟದ ಉನ್ನತ ಸಮಿತಿ ರಚಿಸಲಾಗುವುದು’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು.

ರಾಮಯ್ಯ ಇನ್ಸಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಶುಕ್ರವಾರ ಏರ್ಪಡಿಸಿದ್ದ ‘ಎಕ್ಸೀಡ್’ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.

‘ಉನ್ನತ ಸಮಿತಿಯಲ್ಲಿ ಉನ್ನತ ಶಿಕ್ಷಣ, ವೈದ್ಯಕೀಯ ಶಿಕ್ಷಣ, ಸಣ್ಣ ಕೈಗಾರಿಕೆ, ಆರೋಗ್ಯ ಮತ್ತು ಕೌಶಲ ಅಭಿವೃದ್ಧಿ ಸಚಿವರು ಇರಲಿದ್ದಾರೆ’ ಎಂದು  ಹೇಳಿದರು.

‘ಉದ್ಯಮಕ್ಕೆ ಬೇಕಾದಂತೆ ಮಾನವ ಸಂಪನ್ಮೂಲವನ್ನು ರಾಜ್ಯದಲ್ಲಿ ಸಜ್ಜುಗೊಳಿಸಲು ನಾವು ಸಿದ್ಧರಿದ್ದೇವೆ. ಇದರಿಂದ ರಾಜ್ಯದ ಯುವಜನರಿಗೂ ಉದ್ಯೋಗಾವಕಾಶಗಳು ಸಿಗಲಿವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT