ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಪಿ ಕೋರ್ಟ್‌ ಹಾಜರಿಗೆ ವಿನಾಯಿತಿ: ಹೈಕೋರ್ಟ್ ಆದೇಶ

Last Updated 23 ಜೂನ್ 2020, 3:57 IST
ಅಕ್ಷರ ಗಾತ್ರ

ಬೆಂಗಳೂರು: 'ವಿಚಾರಣಾ ಕೋರ್ಟ್‌ಗಳಲ್ಲಿ ಆರೋಪ‌ ನಿಗದಿಪಡಿಸುವಾಗ ಆರೋಪಿ ಹಾಜರಿಗೆ ವಿನಾಯಿತಿ ನೀಡಬಹುದು ಮತ್ತು ವಿಡಿಯೊ ಕಾನ್ಫರೆನ್ಸ್ ಮೂಲಕ ಆರೋಪಿ ಹೇಳಿಕೆ‌ ದಾಖಲಿಸಬಹುದು' ಎಂದು ಹೈಕೋರ್ಟ್ ಆದೇಶಿಸಿದೆ.

ಈ ಕುರಿತ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿ ಈ ಆದೇಶ ನೀಡಿದೆ.

'ಅಪರಾಧ ದಂಡ ಸಂಹಿತೆ (ಸಿಆರ್ ಪಿಸಿ) ಕಲಂ- 313ರ ಅಡಿ ಆರೋಪಿ ವಿಡಿಯೊ ಕಾನ್ಫರೆನ್ಸ್ ಮೂಲಕ ಹೇಳಿಕೆ ದಾಖಲಿಸಲು ಅವಕಾಶವಿದೆ. ಒಂದು ವೇಳೆ ಆರೋಪಿ ಜೈಲಿನಲ್ಲಿದ್ದರೆ ಜೈಲು ಅಧೀಕ್ಷಕರ ಸಮ್ಮುಖದಲ್ಲಿಯೇ ವಿಡಿಯೊ ಕಾನ್ಫರೆನ್ಸ್ ಮೂಲಕ ಉತ್ತರಿಸಬಹುದು, ಅಥವಾ ಕೋರ್ಟ್ ಆರೋಪಿಗೆ ಲಿಖಿತ ಪ್ರಶ್ನೆ ಪಟ್ಟಿಯನ್ನು ಕಳುಹಿಸಬಹುದು' ಎಂದು ನ್ಯಾಯಪೀಠ ಹೇಳಿದೆ.

ಕೊರೊನಾ ಸೋಂಕು ಹರಡುವ ಭೀತಿ ಇರುವ ಹಿನ್ನೆಲೆಯಲ್ಲಿ ನಿಯಮಗಳನ್ನು ತಾತ್ಕಾಲಿಕವಾಗಿ ಸಡಿಲಿಸಿ ಈ ಆದೇಶ ಹೊರಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT