ಬುಧವಾರ, ಅಕ್ಟೋಬರ್ 23, 2019
22 °C

ಆ್ಯಂಬಿಡೆಂಟ್‌ ಕಂಪನಿ ಪ್ರಕರಣ: ಸಿಬಿಐಗೆ ಹೈಕೋರ್ಟ್ ನೋಟಿಸ್‌

Published:
Updated:

ಬೆಂಗಳೂರು: ‘ಹೂಡಿಕೆದಾರರಿಗೆ ವಂಚನೆ ಎಸಗಿದ ಆರೋಪ ಎದುರಿಸುತ್ತಿರುವ ಆ್ಯಂಬಿಡೆಂಟ್ ಕಂಪನಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು’ ಎಂದು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಸಿಬಿಐಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ‘‌ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ’ಯ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಸಲ್ಲಿಸಿರುವ ಅರ್ಜಿಯನ್ನು ರಜಾಕಾಲದ ವಿಭಾಗೀಯ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಚ್‌.ಟಿ.ನರೇಂದ್ರ ಪ್ರಸಾದ್ ಹಾಗೂ ನ್ಯಾಯಮೂರ್ತಿ ಅಶೋಕ್‌ ಎಸ್‌.ಕಿಣಗಿ ಮಂಗಳವಾರ ವಿಚಾರಣೆ ನಡೆಸಿದರು.

ಆರೋಪವೇನು?: ‘ಆ್ಯಂಬಿಡೆಂಟ್‌ ಕಂಪನಿ, ಇಂಜಾಝ್‌ ಮತ್ತು ಸಂಚಯ ಕಂಪನಿ ಹೂಡಿಕೆದಾರರಿಗೆ ವಂಚಿಸಿದ್ದು, ಈ ಪ್ರಕರಣದಲ್ಲಿ ಯಾರ ವಿರುದ್ಧವೂ ಈತನಕ ಕ್ರಮ ಜರುಗಿಸಿಲ್ಲ. ಆದ್ದರಿಂದ ಟೆಲಿಫೋನ್‌ ಕದ್ದಾಲಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿರುವ ರೀತಿಯಲ್ಲೇ ಈ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

‘ಆ್ಯಂಬಿಡೆಂಟ್‌ನ ಮುಖ್ಯಸ್ಥ ಸೈಯದ್‌ ಫರೀದ್‌ ಅಹಮದ್‌, ಆ್ಯಂಬಿಡೆಂಟ್‌ ಜೊತೆ ವ್ಯವಹರಿಸಿರುವ ಸಂಚಯ ಕಂಪನಿಯ ಮುಖ್ಯಸ್ಥ ವಿಜಯ್ ಟಾಟಾ ಸೇರಿದಂತೆ ಈ ಪ್ರಕರಣದಲ್ಲಿ ಮಾಜಿ ಮಂತ್ರಿಗಳು, ಶಾಸಕರು ಹಾಗೂ ಪೊಲೀಸ್‌ ಅಧಿಕಾರಿಗಳು ಭಾಗಿಯಾಗಿದ್ದಾರೆ’ ಎಂಬುದು ಅರ್ಜಿದಾರರ ಆರೋಪ.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)