ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಪತ್ತು ನಿರ್ವಹಣೆ: ಸರ್ಕಾರದ ವೈಖರಿಗೆ ಅತೃಪ್ತಿ

Last Updated 5 ಫೆಬ್ರುವರಿ 2020, 19:47 IST
ಅಕ್ಷರ ಗಾತ್ರ

ಬೆಂಗಳೂರು: ‘ವಿಪತ್ತು ನಿರ್ವಹಣಾ ಕಾಯ್ದೆ–2005 ಕಾಯ್ದೆ ಜಾರಿಗೆ ಬಂದಾಗಿನಿಂದ ರಾಜ್ಯ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ, ರಾಜ್ಯ ಮಟ್ಟದ ಕಾರ್ಯಕಾರಿ ಸಮಿತಿ, ಜಿಲ್ಲಾ ಮಟ್ಟದ ಪ್ರಾಧಿಕಾರ ಮತ್ತು ಸಮಿತಿಗಳು ಎಷ್ಟು ಸಭೆಗಳನ್ನು ನಡೆಸಿವೆ ಎಂಬ ಬಗ್ಗೆ ಸಂಪೂರ್ಣ ವಿವರ ಒದಗಿಸಿ’ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಈ ಕುರಿತಂತೆ ಕಾನೂನು ಸೇವಾ ಸಮಿತಿ ಹಾಗೂ ಎ. ಮಲ್ಲಿಕಾರ್ಜುನ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ ವಾದ ಮಂಡಿಸಿ ಕಾಯ್ದೆಯ ಅನುಷ್ಠಾನಕ್ಕೆ ಸಂಬಂಧಿಸಿದ ಪ್ರಮಾಣ ಪತ್ರವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ಇದನ್ನು ಪರಿಶೀಲಿಸಿದ ನ್ಯಾಯಪೀಠ, ‘ಸರ್ಕಾರದ ಕಾರ್ಯವೈಖರಿ ತೃಪ್ತಿಕರವಾಗಿಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿತು. ಕಾಯ್ದೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಮಗ್ರ ಆದೇಶ ನೀಡುವುದಾಗಿ ತಿಳಿಸಿ ವಿಚಾರಣೆಯನ್ನು ಮಾರ್ಚ್‌ 6ಕ್ಕೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT