ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಷ್ಕರ ಕೈಬಿಡಲು ಅತಿಥಿ ಉಪನ್ಯಾಸಕರಿಗೆ ಮನವಿ

Published 2 ಡಿಸೆಂಬರ್ 2023, 1:30 IST
Last Updated 2 ಡಿಸೆಂಬರ್ 2023, 1:30 IST
ಅಕ್ಷರ ಗಾತ್ರ

ಬೆಂಗಳೂರು: ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ. ಆದ್ದರಿಂದ ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಟ್ಟು, ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್‌ ಮನವಿ ಮಾಡಿದರು.

ವಿವಿಧ ಬೇಡಿಕೆಗಳನ್ನು ಈಡೇರಿಸುವುದಕ್ಕೆ ಸಂಬಂಧಿಸಿದಂತೆ ಅತಿಥಿ ಉಪನ್ಯಾಸಕರ ಸಂಘಟನೆಗಳ ಪ್ರಮುಖರ ಜತೆ ಸಚಿವರು ಶುಕ್ರವಾರ ಸಭೆ ನಡೆಸಿದರು. ಬೇಡಿಕೆ ಈಡೇರಿಸಲು ಆರಂಭಿಸಿರುವ ಪ್ರಯತ್ನದ ಕುರಿತು ಸಂಘಟನೆ ಪ್ರಮುಖರಿಗೆ ವಿವರಿಸಿದ ಅವರು, ಮುಷ್ಕರ ನಿಲ್ಲಿಸುವಂತೆ ಮನವಿ ಮಾಡಿದರು.

 ‘ಅತಿಥಿ ಉಪನ್ಯಾಸಕರ ಬೇಡಿಕೆಗೆ ಸ್ಪಂದಿಸಲು ಸರ್ಕಾರ ಮುಕ್ತವಾಗಿದೆ. ಈ ಕುರಿತು ಮುಖ್ಯಮಂತ್ರಿಯವರ ಜತೆ ಒಮ್ಮೆ ಚರ್ಚಿಸಿದ್ದೇನೆ. ರಾಜ್ಯದಲ್ಲಿ ಶೇಕಡ 70ರಷ್ಟು ಅತಿಥಿ ಉಪನ್ಯಾಸಕರೇ ಇದ್ದಾರೆ. ಅವರ ಮೇಲಿನ ಒತ್ತಡ ಕುರಿತು ನನಗೆ ಅರಿವಿದೆ’ ಎಂದರು.

2013–18ರ ಅವಧಿಯಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರವು ಅತಿಥಿ ಉಪನ್ಯಾಸಕರ ಎಲ್ಲ ಬೇಡಿಕೆಗಳನ್ನು ಈಡೇರಿಸಿತ್ತು. ಈ ಬಾರಿಯೂ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಸರ್ಕಾರ ನಡೆದುಕೊಳ್ಳಲಿದೆ ಎಂದು ಭರವಸೆ ನೀಡಿದರು.

ಬೇಡಿಕೆ ಈಡೇರಿಸುವ ಕುರಿತು ಮುಖ್ಯಮಂತ್ರಿಯವರ ಜತೆ ಚರ್ಚಿಸಬೇಕು. ಆರ್ಥಿಕ ಇಲಾಖೆ ಮತ್ತು ಕಾನೂನು ಇಲಾಖೆಗಳ ಜತೆ ಚರ್ಚಿಸಿದ ನಂತರವೇ ತೀರ್ಮಾನಕ್ಕೆ ಬರಬೇಕಾಗುತ್ತದೆ. ಆದ್ದರಿಂದ ಈಗ ಮುಷ್ಕರ ಕೈಬಿಡಬೇಕು ಎಂದು ಮನವಿ ಮಾಡಿದರು.

ಅತಿಥಿ ಉಪನ್ಯಾಸಕರ ವಿವಿಧ ಸಂಘಟನೆಗಳ ನೂರಕ್ಕೂ ಹೆಚ್ಚು ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಸ್‌.ಆರ್‌. ಉಮಾಶಂಕರ್, ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕ ಅಪ್ಪಾಜಿಗೌಡ ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT