ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ ದಾಖಲು

Published 16 ಮಾರ್ಚ್ 2024, 0:22 IST
Last Updated 16 ಮಾರ್ಚ್ 2024, 0:22 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿಯೇ ಶುಕ್ರವಾರ ಗರಿಷ್ಠ ತಾಪಮಾನ ಕಲಬುರಗಿ ಜಿಲ್ಲೆಯಲ್ಲಿ 39.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು. ರಾಜ್ಯದಾದ್ಯಂತ ಒಣಹವೆ ಮುಂದುವರಿದಿದ್ದು, ಹಲವು ಜಿಲ್ಲೆಗಳಲ್ಲಿ ಬಿಸಿಲ ತಾಪಮಾನ ಏರಿಕೆಯಾಗಿದೆ.

ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ಬೆಂಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಲ್ಯಾಣ ಕರ್ನಾಟಕ ಭಾಗದ ಕೆಲವು ಭಾಗದಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ ಎಂದು ಎಚ್ಚರಿಸಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 35, ಕನಿಷ್ಠ ಉಷ್ಣಾಂಶ 25 ಡಿಗ್ಸಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT