ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಹಿಂದೂ ಹಾಗೂ ಕ್ರೈಸ್ತ ಸಮುದಾಯಗಳ ಹೆಸರಿನಲ್ಲಿ ಸೃಷ್ಟಿಸುತ್ತಿರುವ ಗೊಂದಲವನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿ ಹಿಂದೂ ಹಿತ ರಕ್ಷಣಾ ಸಮಿತಿ ಮಂಗಳವಾರ ಮನವಿ ಸಲ್ಲಿಸಿತು.

ಕಾಂಗ್ರೆಸ್ ಸರ್ಕಾರ ಸಮೀಕ್ಷೆಯ ಹೆಸರಲ್ಲಿ ಹೊಸ ಕ್ರೈಸ್ತ ಜಾತಿಗಳನ್ನು ಸೃಷ್ಟಿಸುತ್ತಿರುವುದು ಜಾತಿ ಪಟ್ಟಿ ಗಮನಿಸಿದಾಗ ತಿಳಿಯಲಿದೆ. ಕ್ರೈಸ್ತರನ್ನು ಹಿಂದೂ ಜಾತಿಗಳ ನಡುವೆ ಎಳೆದು ತಂದು ಸಮಾಜವನ್ನು ದಿಕ್ಕು ತಪ್ಪಿಸುತ್ತಿದೆ. ಇದನ್ನು ಸಂಪೂರ್ಣವಾಗಿ ಕೈಬಿಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ತಹಸಿಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಕುರುಬ ಕ್ರೈಸ್ತ, ಮಡಿವಾಳ ಕ್ರೈಸ್ತ, ಮಾದಿಗ ಕ್ರೈಸ್ತ, ಹೊಲೆಯ ಕ್ರೈಸ್ತ, ಲಿಂಗಾಯತ ಕ್ರೈಸ್ತ, ಒಕ್ಕಲಿಗ ಕ್ರೈಸ್ತ ಸೇರಿದಂತೆ 48 ಹೊಸ ಕ್ರೈಸ್ತ ಜಾತಿಗಳನ್ನು ಸಮೀಕ್ಷೆಯ ಹೆಸರಿನಲ್ಲಿ ಹುಟ್ಟುಹಾಕಿ ಕ್ರೈಸ್ತರ ಮೂಲ ಪಂಗಡಗಳನ್ನು ಕೈಬಿಟ್ಟಿದೆ. ಕರ್ನಾಟಕದಲ್ಲಿ ಜಾರಿಯಲ್ಲಿರುವ ಮತಾಂತರ ನಿರ್ಬಂಧ ಕಾಯ್ದೆಯನ್ನು ಸರ್ಕಾರವೇ ದುರ್ಬಲಗೊಳಿಸುವಂತೆ ಕಾಣುತ್ತಿದೆ ಎಂದು ಸಮಿತಿಯ ಪ್ರಮುಖರು ಆರೋಪಿಸಿದರು.

ಸಮಿತಿಯ ಸಂಯೋಜಕ ಗೋವರ್ಧನ್, ಸಹ ಸಂಯೋಜಕ ಶ್ರೀನಿವಾಸ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.