ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾತಂತ್ರ್ಯೋತ್ಸವಕ್ಕೆ ಅಡ್ಡಿ:ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

Last Updated 17 ಆಗಸ್ಟ್ 2021, 0:58 IST
ಅಕ್ಷರ ಗಾತ್ರ

ಬೆಂಗಳೂರು: ‘ಪುತ್ತೂರಿನ ಕಬಕದಲ್ಲಿ ಸ್ವಾತಂತ್ರೋತ್ಸವ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡಿದ ದೇಶದ್ರೋಹಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದುಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ.

ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಪೈ,‘ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಮಕ್ಕಳಲ್ಲಿ ದೇಶಭಕ್ತಿಯ ಜಾಗೃತಿ ಮೂಡಿಸಲು ಮನೆಮನೆಗೆ ತೆರಳಿದ್ದ ರಥಯಾತ್ರೆಗೆ ಕೆಲ ದೇಶದ್ರೋಹಿಗಳು ಅಡ್ಡಿಪಡಿಸಿ, ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರನ್ನು ನಿಂದಿಸಿರುವುದು ಖಂಡನೀಯ’ ಎಂದರು.

‘ಇಂತಹ ದೇಶದ್ರೋಹಿಗಳನ್ನು ಈ ಹಂತದಲ್ಲೇ ನಿಯಂತ್ರಣಕ್ಕೆ ತರಬೇಕಿರುವುದು ಸರ್ಕಾರದ ಕರ್ತವ್ಯ. ಇಲ್ಲದಿದ್ದರೆ, ರಾಜ್ಯದಲ್ಲಿ ಅಶಾಂತಿ, ಗಲಭೆಗಳನ್ನು ಸೃಷ್ಟಿಸುವ ಸಾಧ್ಯತೆಗಳು ಇರುತ್ತದೆ. ಹಾಗಾಗಿ, ಈ ಕೃತ್ಯ ಎಸಗಿರುವವರನ್ನುಯಾವುದೇ ಒತ್ತಡಕ್ಕೆ ಮಣಿಯದೆ, ಬಂಧಿಸಿ ಸೂಕ್ತ ಕ್ರಮಕೈಗೊಳ್ಳಬೇಕು’ ಎಂದೂ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT