ಶನಿವಾರ, ಜನವರಿ 18, 2020
26 °C

ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ; ಇತಿಹಾಸಕಾರ ರಾಮಚಂದ್ರ ಗುಹಾ ಬಂಧನ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮಚಂದ್ರ ಗುಹಾ ಅವರನ್ನು ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ವಿರೋಧಿಸಿ ಪ್ರತಿಭಟನೆಗೆ ಮುಂದಾದ ಇತಿಹಾಸಕಾರ ರಾಮಚಂದ್ರ ಗುಹಾ ಅವರನ್ನು ಗುರುವಾರ ಪೊಲೀಸರು ವಶಕ್ಕೆ ಪಡೆದರು. 

ನಗರದಾದ್ಯಂತ ನಿಷೇಧಾಜ್ಞೆ ಜಾರಿ ಮಾಡಿದ್ದು ಯಾವುದೇ ಪ್ರತಿಭಟನೆಗಳಿಗೂ ಪೊಲೀಸ್ ಇಲಾಖೆ ಅನುಮತಿ ನೀಡಿಲ್ಲ. ನಿಷೇಧಾಜ್ಞೆ ಉಲ್ಲಂಘಿಸಿ ಟೌನ್‌ಹಾಲ್‌ ಎದುರು ಪ್ರತಿಭಟನೆ ಅಥವಾ ಪ್ರದರ್ಶನ ನಡೆಸಿದ ಇತಿಹಾಸಕಾರ ರಾಮಚಂದ್ರ ಗುಹಾ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದರು.

'ಇದು ಪ್ರಜಾಪ್ರಭುತ್ವ ವಿರೋಧಿ ನಡೆ. ಪೊಲೀಸರು ಶಾಂತಿಯುತ ಪ್ರತಿಭಟನೆಗೂ ಅವಕಾಶ ನೀಡುತ್ತಿಲ್ಲ' ಎಂದು ರಾಮಚಂದ್ರ ಗುಹಾ ಪ್ರತಿಕ್ರಿಯಿಸಿದ್ದಾರೆ. 

ಇದನ್ನೂ ಓದಿ: Live| ಪೌರತ್ವ ಕಾಯ್ದೆ ವಿರೋಧಿಸಿ ರಸ್ತೆಗಿಳಿದ ಪ್ರತಿಭಟನಕಾರರನ್ನು ವಶಕ್ಕೆ ಪಡೆದ ಪೊಲೀಸರು Live

ಕಮ್ಯುನಿಸ್ಟ್‌ ಪಾರ್ಟಿ(ಐ) ಸಹ ಸಿಎಎ ಮತ್ತು ಎನ್‌ಆರ್‌ಸಿ ವಿರೋಧಿಸಿ ಪ್ರತಿಭಟನೆ ನಡೆಸಿದೆ. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು