ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌ಐವಿ: ಉಚಿತ ಪರೀಕ್ಷೆಗೆ ಸೂಚನೆ

Last Updated 30 ಮಾರ್ಚ್ 2022, 19:30 IST
ಅಕ್ಷರ ಗಾತ್ರ

ಬೆಂಗಳೂರು:ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿನ ಎ.ಆರ್.ಟಿ. ಕೇಂದ್ರಗಳಲ್ಲಿ ನೋಂದಾಯಿಸಿಕೊಂಡ ಎಚ್‌ಐವಿ ಸೋಂಕಿತರಿಗೆ ಎಲ್ಲ ರೀತಿಯವೈದ್ಯಕೀಯ ಪರೀಕ್ಷೆಗಳನ್ನು ಉಚಿತವಾಗಿ ನಡೆಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.

ಈ ಬಗ್ಗೆ ಇಲಾಖೆ ಆಯುಕ್ತ ಡಿ. ರಂದೀಪ್ ಸುತ್ತೋಲೆ ಹೊರಡಿಸಿದ್ದಾರೆ. ‘ಎಚ್‌ಐವಿ ಸೋಂಕಿತರಿಗೆಕೆಲ ಸರ್ಕಾರಿ ಆಸ್ಪತ್ರೆಗಳಲ್ಲಿಪ್ರಯೋಗಾಲಯ ಹಾಗೂ ಇತರೆ ಪರೀಕ್ಷೆಗಳಿಗೆ ಶುಲ್ಕ ವಿಧಿಸುತ್ತಿರುವುದು ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಗಮನಕ್ಕೆ ಬಂದಿದೆ.ಸೋಂಕಿತರಲ್ಲಿ ಬಹುತೇಕರು ಬಡ ಕುಟುಂಬದವರಾಗಿದ್ದಾರೆ. ಹೀಗಾಗಿ, ಚಿಕಿತ್ಸೆಗೆ ನಡೆಸುವ ಪೂರ್ವಭಾವಿ ಪರೀಕ್ಷೆಗಳನ್ನುಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ನಡೆಸಬೇಕು’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT