ಬೆಂಗಳೂರು: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯು (ಎಚ್ಕೆಇಎಸ್) ಫಿಸಿಕ್ಸ್ವಾಲಾ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿದೆ ಎಂದು ಎಚ್ಕೆಇಎಸ್ ಅಧ್ಯಕ್ಷ ಶಶೀಲ ಜಿ. ನಮೋಶಿ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಒಪ್ಪಂದದ ಪ್ರಕಾರ ಬೆಂಗಳೂರಿನ ಸದಾಶಿವನಗರದಲ್ಲಿರುವ ಸೊಸೈಟಿಯ ಪಿ.ಯು ಕಾಲೇಜಿನ ಹೆಸರನ್ನು ಎಚ್ಕೆಇಎಸ್ ಶ್ರೀ ವೀರೇಂದ್ರ ಪಾಟೀಲ್ ಪಿಸಿಕ್ಸ್ವಾಲಾ ಪಿ.ಯು ಕಾಲೇಜು ಎಂದು ನಾಮಕರಣ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.

‘ಪಿಸಿಕ್ಸ್ವಾಲಾ ಸಂಸ್ಥೆಯ ಸಿಬ್ಬಂದಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳಿಗೆ ನೀಟ್, ಜೆಇಇ ಮೇನ್ಸ್, ಅಡ್ವಾನ್ಸ್ ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ವಿಶೇಷ ತರಗತಿಗಳನ್ನು ನಡೆಸಲಿದ್ದಾರೆ. ಇದು ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಥತೆ ನಡೆಸಲು ಸಹಾಯಕವಾಗಲಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.