ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಾ ಸಮ್ಮೇಳನ: ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು

Published : 14 ಫೆಬ್ರುವರಿ 2024, 16:10 IST
Last Updated : 14 ಫೆಬ್ರುವರಿ 2024, 16:10 IST
ಫಾಲೋ ಮಾಡಿ
Comments

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಇದೇ 27ರಂದು ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರದಲ್ಲಿ ಭಾಗವಹಿಸುವ ಅಧಿಕಾರಿ ಮತ್ತು ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲಾಗಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸುವ ಬೆಂಗಳೂರು ನಗರ ಜಿಲ್ಲೆಯ ಅಧಿಕಾರಿ, ನೌಕರರಿಗೆ ಫೆ. 27ರಂದು ಒಂದು ದಿನ, ಇತರ ಜಿಲ್ಲೆಗಳ ಅಧಿಕಾರಿ, ನೌಕರರಿಗೆ ಪ್ರಯಾಣದ ದಿನವೂ ಸೇರಿ ಫೆ. 27 ಮತ್ತು 28ರಂದು ಎರಡು ದಿನಗಳ ರಜೆಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮಂಜೂರು ಮಾಡಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸುವ ನೌಕರರು ಸಂಬಂಧಪಟ್ಟ ಅಧಿಕಾರಿಗಳಿಗೆ ಸಾಂದರ್ಭಿಕ ರಜೆ ಮಂಜೂರಾತಿಗೆ ಮನವಿ ಸಲ್ಲಿಸಬೇಕು. ಸಮ್ಮೇಳನದಲ್ಲಿ ಭಾಗವಹಿಸಿದ ಬಗ್ಗೆ ಹಾಜರಾತಿ ಪತ್ರವನ್ನು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಿಂದ ಅಥವಾ ಅವರ ನಾಮನಿರ್ದೇಶನ ಹೊಂದಿದ ಅಧಿಕಾರಿಯಿಂದ ಪಡೆದು ನೀಡಬೇಕು. ನಂತರ ಸಂಬಂಧಪಟ್ಟ ಅಧಿಕಾರಿ ರಜೆ ಮಂಜೂರು ಮಾಡಬೇಕು ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT