ಮಂಗಳವಾರ, ಮೇ 17, 2022
24 °C

ಚೂರಿ ಇರಿತ ಪ್ರಕರಣ: ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಬೆಂಗಳೂರು: ನಗರದಲ್ಲಿ ಸೋಮವಾರ ರಾತ್ರಿ, ಚೂರಿ ಇರಿತಕ್ಕೆ ಒಬ್ಬ ಯುವಕ ಬಲಿಯಾದ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಿಸಿದಂತೆ ಇದುವರೆಗೆ ಮೂರು ಮಂದಿಯನ್ನು ಪೋಲೀಸರು ಬಂಧಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ, ತಕ್ಷಣಕ್ಕೆ ಸಿಕ್ಕ ಮಾಹಿತಿ ಹಾಗೂ ಮೂಲಗಳ, ಪ್ರಕಾರ, ಉರ್ದು ಮಾತನಾಡದ ಕಾರಣ, ಯುವಕನನ್ನು ಚೂರಿಯಿಂದ ಚುಚ್ಚಿ ಕೊಲೆಗೈಯ್ಯಲಾಗಿದೆ ಎಂದು ಹೇಳಿಕೆ ನೀಡಲಾಗಿದೆ.

ಆದರೆ, ಪ್ರಸ್ತುತ ಘಟನೆಗೆ ಸಂಬಂಧಿಸಿದಂತೆ, ಪೂರ್ಣ ಹಾಗೂ ವಿಸ್ತೃತ ಮಾಹಿತಿ ದೊರಕಿದ್ದು, ಸ್ಥಳದಲ್ಲಿ ನಡೆದ ದ್ವಿಚಕ್ರ ವಾಹನ ಅಪಘಾತಕ್ಕೆ ಸಂಬಂಧಿಸಿದಂತೆ, ಯುವಕರ ನಡುವೆ ಮಾತಿನ ಚಕಮಕಿ ನಡೆದಿದೆ.

ವಾಗ್ಯುದ್ದದ ನಡುವೆ, ವಾಹನ ಚಾಲಕನಿಗೆ, ದುಷ್ಕರ್ಮಿಗಳು, ಚೂರಿಯಿಂದ ಇರಿದು ಗಾಯಗೊಳಿಸಿದ್ದಾರೆ.

ದುರದೃಷ್ಟವಶಾತ್, ಗಾಯಾಳುವಿಗೆ ಚಿಕಿತ್ಸೆ ಕೊಡಿಸಿದರೂ, ಬದುಕುಳಿಯಲಿಲ್ಲ. ಈ ಘಟನೆ ಅತ್ಯಂತ ಅಮಾನುಷವಾಗಿದ್ದು, ಕೊಲೆ ಆಪಾದಿತರನ್ನು ಶಿಕ್ಷೆಗೆ ಗುರಿ ಪಡಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಆರಂಭದಲ್ಲಿ ನೀಡಿದ್ದ ಹೇಳಿಕೆ ಬಗ್ಗೆ ಚರ್ಚೆಯಾಗುತ್ತಿದ್ದಂತೆ ಸಚಿವರು ಸ್ಪಷ್ಟನೆ ಕೊಟ್ಟಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು