ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ: ಬಸವರಾಜ ಬೊಮ್ಮಾಯಿ

ಗೃಹ ಸಚಿವ ಬಸವರಾಜ ಬೊಮ್ಮಾಯಿ
Last Updated 24 ಸೆಪ್ಟೆಂಬರ್ 2020, 22:12 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌ ಸದಸ್ಯ ಮರಿತಿಬ್ಬೇಗೌಡ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ‘ಪೊಲೀಸ್‌ ಇಲಾಖೆಯ ವಿವಿಧ ವಿಭಾಗಗಳಲ್ಲಿ 2,094 ಸಬ್‌ ಇನ್‌ಸ್ಪೆಕ್ಟರ್‌, 1,024 ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌, 1,525 ಹೆಡ್‌ ಕಾನ್‌ಸ್ಟೆಬಲ್‌ ಮತ್ತು 15,560 ಕಾನ್‌ಸ್ಟೆಬಲ್‌ಗಳ ಹುದ್ದೆಗಳು ಖಾಲಿ ಇವೆ’ ಎಂದು ಮಾಹಿತಿ ನೀಡಿದ್ದಾರೆ.

247 ಜನರಿಗೆ ಭದ್ರತೆ: ಕಾಂಗ್ರೆಸ್‌ ಸದಸ್ಯ ಆರ್‌. ಧರ್ಮಸೇನ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಗೃಹ ಸಚಿವರು, ‘ಮಾಜಿ ಶಾಸಕರು, ಮಾಜಿ ಸಂಸದರು ಸೇರಿದಂತೆ ರಾಜ್ಯದ 247 ಗಣ್ಯ ವ್ಯಕ್ತಿಗಳಿಗೆ ಸ್ಥಳೀಯ ಪರಿಸ್ಥಿತಿ ಹಾಗೂ ಜೀವ ಬೆದರಿಕೆ ಆಧಾರದಲ್ಲಿ ಭದ್ರತೆ ಒದಗಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಮೂರು ವರ್ಷದಲ್ಲಿ 1.17 ಲಕ್ಷ ಕೋಟಿ ಸಾಲ: 2017–18ರಿಂದ 2019–20ರ ಅವಧಿಯಲ್ಲಿ ರಾಜ್ಯ ಸರ್ಕಾರ ವಿವಿಧ ಮೂಲಗಳಿಂದ ₹ 1,17,494.93 ಕೋಟಿ ಸಾಲ ಪಡೆದಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ.

ಕಾಂಗ್ರೆಸ್‌ ಸದಸ್ಯ ಆರ್‌. ಧರ್ಮಸೇನ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಮುಖ್ಯಮಂತ್ರಿ, ‘2017–18ರಲ್ಲಿ ₹ 25,121.86 ಕೋಟಿ, 2018–19ರಲ್ಲಿ ₹ 41,94.06 ಕೋಟಿ ಮತ್ತು 2019–20ರಲ್ಲಿ ₹ 50,459.01 ಕೋಟಿ ಸಾಲ ಪಡೆಯಲಾಗಿದೆ’ ಎಂದುವಿವರಿಸಿದರು.

ಜೆಡಿಎಸ್‌ ಸದಸ್ಯ ಎನ್‌. ಅಪ್ಪಾಜಿಗೌಡ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಮುಖ್ಯಮಂತ್ರಿ, ‘ರಾಜ್ಯ ಸರ್ಕಾರವು 2019–20ರಲ್ಲಿ ರಿಸರ್ವ್‌ ಬ್ಯಾಂಕ್‌ನಿಂದ ₹ 48,499.38 ಕೋಟಿ ಮತ್ತು ನಬಾರ್ಡ್‌ನಿಂದ ₹ 973.89 ಕೋಟಿ ಸಾಲ ಪಡೆದಿದೆ. 2020–21ರಲ್ಲಿ ರಿಸರ್ವ್‌ ಬ್ಯಾಂಕ್‌ನಿಂದ ₹ 12,000 ಕೋಟಿ ಮತ್ತು ನಬಾರ್ಡ್‌ನಿಂದ ₹ 52.29 ಕೋಟಿ ಸಾಲ ಪಡೆದಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT