ಭಾನುವಾರ, ಏಪ್ರಿಲ್ 5, 2020
19 °C

ವಿದೇಶಿ ಪ್ರಯಾಣಿಕರಿಗೆ ಮನೆಯಲ್ಲಿ ಪ್ರತ್ಯೇಕ ವಾಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ಸೋಂಕು ತಗುಲಿರುವ ಶಂಕೆ ಮೇರೆಗೆ ಮನೆಯಲ್ಲೇ ಪ್ರತ್ಯೇಕ ವಾಸಕ್ಕೆ ಸೂಚನೆ ನೀಡಿರುವ ವ್ಯಕ್ತಿಗಳು ಅದನ್ನು ಪಾಲಿಸುತ್ತಿದ್ದಾರೆಯೇ ಎಂಬುದನ್ನು ಪಾಲಿಕೆ ಅಧಿಕಾರಿಗಳು ಪರಿಶೀಲಿಸಲಿದ್ದಾರೆ. ಮನೆಗೆ ಬಂದು ಅವರು ಯಾವ ರೀತಿ ಆರೋಗ್ಯ ಕಾಳಜಿ ವಹಿಸಬೇಕು ಎಂಬ ಬಗ್ಗೆ ನಿರ್ದೇಶನ ನೀಡಲಿದ್ದಾರೆ.

ಇದೇ ಮಾರ್ಚ್‌ 8ರ ಬಳಿಕ ವಿದೇಶಗಳಿಂದ ಬಂದಿರುವ ಪ್ರಯಾಣಿಕರು ಮನೆಯಲ್ಲೇ 14 ದಿನಗಳ ಪ್ರತ್ಯೇಕ ವಾಸ ಮಾಡುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಇದನ್ನು ಪರಿಶೀಲಿಸಲು ಅಧಿಕಾರಿಗಳ ತಂಡ ರಚಿಸಲಾಗಿದೆ. ಈ ತಂಡದ ಅಧಿಕಾರಿಗಳು ಆಯಾ ವಲಯಗಳ ಡಿಸಿಪಿ ಕಚೇರಿಯಲ್ಲಿ ಹಾಜರಾಗಿ ಕರ್ತವ್ಯ ನಿರ್ವಹಿಸಲಿ ದ್ದಾರೆ. 

ಅಧಿಕಾರಿಗಳು ಸೋಮವಾರ ಬೆಳಿಗ್ಗೆ  8ಕ್ಕೆ ಆಯಾ ವಲಯದ ಡಿಸಿಪಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕು.  ಸೂಚಿಸುವ ಪೋಲಿಸ್‌ ಠಾಣಾ ವ್ಯಾಪ್ತಿಯಲ್ಲಿ ವಿದೇಶದಿ೦ದ ಆಗಮಿಸಿದವರ ಮನೆಗಳಿಗೆ ಭೇಟಿ ನೀಡಿ ನಿರ್ದೇಶನಗಳನ್ನು ನೀಡಬೇಕು’ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್‌.ಅನಿಲ್‌ ಕುಮಾರ್‌ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು