ಬುಧವಾರ, ಆಗಸ್ಟ್ 12, 2020
27 °C

ಮನೆ ಬೀಗ ಮುರಿದು ಕಳವು; ಆರೋಪಿ ಬಂಧನ‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಾಗಲಗುಂಟೆ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ 2019ರಲ್ಲಿ ನಡೆದಿದ್ದ ಕಳ್ಳತನ ಸಂಬಂಧ ಆರೋಪಿ ಅನಿಲ್ ದೇವ್ (32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

‘ಜಾಲಹಳ್ಳಿಯ ಅನಿಲ್‌ದೇವ್ ಬಂಧನದಿಂದ 8 ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ. ಆತನಿಂದ ₹19 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಟಿ.ದಾಸರಹಳ್ಳಿ ಕಲ್ಯಾಣನಗರದ ನಿವಾಸಿ ಪ್ರಭಾಕರನ್ ಕುಟುಂಬ ಸಮೇತ ತಮಿಳುನಾಡಿಗೆ ಹೋಗಿದ್ದರು. ಮನೆಯಲ್ಲಿ ಯಾರೂ ಇಲ್ಲದ್ದನ್ನು ತಿಳಿದುಕೊಂಡ ಆರೋಪಿ, ಬೀಗ ಮುರಿದು ಕಳ್ಳತನ ಎಸಗಿ ಪರಾರಿಯಾಗಿದ್ದ’ ಎಂದರು.

‘ಬಾಗಲಗುಂಟೆ, ಸೋಲದೇವನಹಳ್ಳಿ, ಪೀಣ್ಯ ಠಾಣೆ ವ್ಯಾಪ್ತಿಯಲ್ಲೂ ಆರೋಪಿ ಕೃತ್ಯ ಎಸಗಿದ್ದು ವಿಚಾರಣೆಯಿಂದ ಗೊತ್ತಾಗಿದೆ’ ಎಂದೂ ಪೊಲೀಸರು ಹೇಳಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.