ಶನಿವಾರ, ಸೆಪ್ಟೆಂಬರ್ 25, 2021
25 °C

ಕೆಲಸಕ್ಕಿದ್ದ ಮನೆಯಲ್ಲಿ ಕಳವು; ಮಹಿಳೆ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆಲಸಕ್ಕಿದ್ದ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪದಡಿ ಮಹಿಳೆಯೊಬ್ಬರನ್ನು ಮಡಿವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಜೋಗಿಪಾಳ್ಯ ನಿವಾಸಿಯಾಗಿದ್ದ ಮಹಿಳೆ, ವೈದ್ಯರೊಬ್ಬರ ಮನೆಯಲ್ಲಿ ಕೆಲಸಕ್ಕಿದ್ದರು. ಅದೇ ಮನೆಯಲ್ಲೇ ಕಳ್ಳತನ ಮಾಡಿದ್ದರು ಎನ್ನಲಾಗಿದೆ. ವೈದ್ಯ ನೀಡಿದ್ದ ದೂರು ಆಧರಿಸಿ ಮಹಿಳೆಯನ್ನು ಬಂಧಿಸಲಾಗಿದೆ. ₹ 12 ಲಕ್ಷ ಮೌಲ್ಯದ ವಜ್ರ ಹಾಗೂ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಮಹಿಳೆ, ಒಂದೊಂದೇ ಆಭರಣಗಳನ್ನು ಕದ್ದಿದ್ದರು. ಇತ್ತೀಚೆಗೆ ಮನೆ ಮಾಲೀಕರು ಆಭರಣಗಳ ಪರಿಶೀಲನೆ ನಡೆಸಿದ್ದಾಗ, ಕೃತ್ಯ ಗಮನಕ್ಕೆ ಬಂದಿತ್ತು. ಆಗಸ್ಟ್ 23ರಂದು ಠಾಣೆಗೆ ದೂರು ನೀಡಿದ್ದರು’ ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು