ಶನಿವಾರ, ಮೇ 30, 2020
27 °C

ಮಾಜಿ ಯೋಧರಿಗೆ ವಸತಿ ನೀಡಲು ಆದ್ಯತೆ: ಸೋಮಣ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವೈಟ್‌ಫೀಲ್ಡ್ (ಬೆಂಗಳೂರು)‌: ‘ಮಹದೇವಪುರ ಕ್ಷೇತ್ರದ ಕೊಡತಿ ಗ್ರಾಮ ಸಮೀಪ ರಾಜೀವಗಾಂಧಿ ವಸತಿ ನಿಗಮದ ವತಿಯಿಂದ ಬಿಎಸ್‌ವೈ ಯೋಜನೆ ಅಡಿಯಲ್ಲಿ ನಿರ್ಮಿಸಿರುವ ಮನೆಗಳನ್ನು ನೀಡುವಾಗ ಮೊದಲು ಮಾಜಿ ಯೋಧರಿಗೆ ಮತ್ತು ಸ್ಥಳೀಯ ವಸತಿ ನಿರ್ಗತಿಕರಿಗೆ ಆದ್ಯತೆ ನೀಡಬೇಕು’ ಎಂದು ವಸತಿ ಸಚಿವ ಸೋಮಣ್ಣ ಅಧಿಕಾರಿಗಳಿಗೆ ಸೂಚಿಸಿದರು.

ಕೊಡತಿ ಸಮೀಪ ನೂತನವಾಗಿ ನಿರ್ಮಿಸಿರುವ 264 ಮನೆಗಳ ಸ್ಥಿತಿ–ಗತಿ ಪರಿಶೀಲಿಸಿದ ನಂತರ ಮಾತನಾಡಿದ ಅವರು, ‘ಅಧಿಕಾರಿಗಳು ಹಣದ ಆಮಿಷದಿಂದ ಬೇರೆಯವರಿಗೆ ನೀಡಿರುವುದು ಕಂಡು ಬಂದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

‘ಮಾಜಿ ಸೈನಿಕರು ಬೆಂಗಳೂರಿನಲ್ಲಿ ಮನೆ ಪಡೆದಿದ್ದು, ಮತ್ತೊಮ್ಮೆ ಪಡೆದಿದ್ದರೆ ಅವರಿಗೆ ಹಣ ವಾಪಸ್‌ ಬರುವುದಿಲ್ಲ ಮತ್ತು ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

‘ನಗರದಲ್ಲಿ 1 ಲಕ್ಷ ಮನೆಗಳನ್ನು ನಿರ್ಮಿಸಿ ವಸತಿ ಇಲ್ಲದವರಿಗೆ ನೀಡಲಾಗುವುದು’ ಎಂದು ಹೇಳಿದರು.

ಶಾಸಕ ಅರವಿಂದ ಲಿಂಬಾವಳಿ, ‘ಮಾರತ್ತಹಳ್ಳಿ ಮತ್ತು ಸೂಲಿಕುಂಟೆ ಗ್ರಾಮಗಳಲ್ಲಿ ಕೊಳಚೆ ನಿರ್ಮೂಲನೆ ಮಂಡಳಿ ವತಿಯಿಂದ ನಿರ್ಮಿಸಿರುವ ಮನೆಗಳಲ್ಲಿ ಕ್ಷೇತ್ರದ ಬಡ ಜನತೆಗೆ ಆದ್ಯತೆ ನೀಡಲಾಗುತ್ತದೆ. ಅಧಿಕಾರಿಗಳು ಹಣದ ಆಸೆಯಿಂದ ಇತರರಿಗೆ ನೀಡಿರುವ ಮನೆಗಳನ್ನು ಖಾಲಿ ಮಾಡಿಸಲಾಗುವುದು’ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೋಜನಾ ನಿರ್ದೇಶಕ ಎಂ.ಡಿ ರಾಮದಾಸ್ ಮನೋಹರ್, ಬೆಂಗಳೂರು ಪೂರ್ವ ತಾಲ್ಲೂಕು ತಹಶೀಲ್ದಾರ್ ತೇಜಸ್ ಕುಮಾರ್, ಪ್ರಧಾನ ವ್ಯವಸ್ಥಾಪಕ ಮಹದೇವಪ್ರಸಾದ್, ಸ್ಥಳೀಯ ಮುಖಂಡರಾದ ಮನೋಹರ ರೆಡ್ಡಿ, ಜಯಚಂದ್ರರೆಡ್ಡಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು