ಬೆಂಗಳೂರು: ಸಾಮಾಜಿಕ ಜಾಲತಾಣದ ಮೂಲಕ ವೈದ್ಯರೊಬ್ಬರನ್ನು ಪರಿಚಯ ಮಾಡಿಕೊಂಡು ‘ಹನಿಟ್ರ್ಯಾಪ್’ಗೆ ಸಿಲುಕಿಸಿ₹10 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಡಿ ಯುವತಿ ಸೇರಿ ಮೂವರನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಠಾಣೆ ವ್ಯಾಪ್ತಿಯಲ್ಲಿ ವಾಸವಿರುವ 40 ವರ್ಷದ ವೈದ್ಯ ಇತ್ತೀಚೆಗಷ್ಟೇ ದೂರು ನೀಡಿದ್ದರು.ಯುವತಿ, ಆಕೆ ಸ್ನೇಹಿತರಾದ ಪ್ರಜ್ವಲ್ ಹಾಗೂ ಅನಿರುದ್ಧ ಎಂಬುವರನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಯುವತಿ ಹಾಗೂ ಪ್ರಜ್ವಲ್ ಪರಸ್ಪರ ಪ್ರೀತಿಸುತ್ತಿದ್ದರು ಎಂಬುದು ಗೊತ್ತಾಗಿದೆ. ಆತನೇ ಸಂಚು ರೂಪಿಸಿ ಯುವತಿಯಿಂದ ಕೃತ್ಯ ಮಾಡಿಸಿದ್ದ. ಅದಕ್ಕೆ ಸ್ನೇಹಿತ ಅನಿರುದ್ಧ ಸಹಕಾರ ನೀಡಿದ್ದನೆಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದೂ ತಿಳಿಸಿದರು.

ಗುಪ್ತದಳ ಅಧಿಕಾರಿಗಳೆಂದು ಬೆದರಿಕೆ:‘ವೈದ್ಯನನ್ನು ಪರಿಚಯ ಮಾಡಿಕೊಂಡಿದ್ದ ಯುವತಿ, ವಿಮಾನ ನಿಲ್ದಾಣ ರಸ್ತೆಯ ಹೋಟೆಲೊಂದಕ್ಕೆ ಕರೆದೊಯ್ದಿದ್ದಳು. ಅಲ್ಲಿಯ ಕೊಠಡಿಯಲ್ಲಿ ಇಬ್ಬರು ಒಟ್ಟಿಗೆ ಇದ್ದರು. ಅದೇ ವೇಳೆಯೇ ಕೊಠಡಿಗೆ ನುಗ್ಗಿ ವಿಡಿಯೊ ಚಿತ್ರೀಕರಣ ಮಾಡಿದ್ದ ಪ್ರಜ್ವಲ್ ಹಾಗೂ ಅನಿರುದ್ಧ, ‘ನಾವು ಗುಪ್ತದಳದ ಅಧಿಕಾರಿಗಳು. ನಿಮ್ಮ ವಿರುದ್ಧ ಪ್ರಕರಣ ದಾಖಲಾಗುವಂತೆ ಮಾಡುತ್ತೇವೆ. ಯುವತಿ ಜೊತೆಗಿನ ಫೋಟೊ ಹಾಗೂ ವಿಡಿಯೊಗಳನ್ನು ಮಾಧ್ಯಮಗಳಿಗೆ ಕೊಡುತ್ತೇವೆ. ಸಾಮಾಜಿಕ ಜಾಲತಾಣದಲ್ಲೂ ಅಪ್ಲೋಡ್ ಮಾಡುತ್ತೇವೆ’ ಎಂಬುದಾಗಿ ಬೆದರಿಸಿದ್ದರು. ಆ ರೀತಿ ಮಾಡಬಾರದೆಂದರೆ ₹10 ಲಕ್ಷ ನೀಡುವಂತೆಯೂ ಬೇಡಿಕೆ ಇಟ್ಟಿದದ್ದರು’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.