ಮಂಗಳವಾರ, ನವೆಂಬರ್ 19, 2019
23 °C

ನಾರಾಯಣಾಚಾರ್ಯ, ರೋಹಿಣಾಕ್ಷಗೆ ಸಾಹಿತ್ಯ ಪ್ರಶಸ್ತಿ

Published:
Updated:

ಬೆಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷತ್, ಕರ್ನಾಟಕ ವತಿಯಿಂದ ಇದೇ ಪ್ರಥಮ ಬಾರಿಗೆ ಆದಿಕವಿ ಪುರಸ್ಕಾರ ಮತ್ತು ವಾಗ್ಧೇವಿ ಪ್ರಶಸ್ತಿ ಸ್ಥಾಪಿಸಲಾಗಿದ್ದು, ಇದೇ 24ರಂದು ಪ್ರಶಸ್ತಿಗಳ ಪ್ರದಾನ ನಡೆಯಲಿದೆ.

ಆದಿಕವಿ ಪುರಸ್ಕಾರಕ್ಕೆ ಹಿರಿಯ ಬರಹಗಾರ ಡಾ. ಕೆ.ಎಸ್. ನಾರಾಯಣಾಚಾರ್ಯ ಮತ್ತು ವಾಗ್ದೇವಿ ಪ್ರಶಸ್ತಿಗೆ ಯುವ ಚಿಂತಕ ಡಾ. ರೋಹಿಣಾಕ್ಷ ಶಿರ್ಲಾಲು ಅವರು ಆಯ್ಕೆಯಾಗಿದ್ದಾರೆ.

ಪ್ರಶಸ್ತಿಗಳು ತಲಾ ₹ 1ಲಕ್ಷ ನಗದು ಒಳಗೊಂಡಿದೆ. ಇದೇ 24ರಂದು ಮಿಥಿಕ್ ಸೊಸೈಟಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಪರಿಷತ್ ಅಧ್ಯಕ್ಷ ಪ್ರೊ. ಪ್ರೇಮಶೇಖರ ಶುಕ್ರವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಪ್ರತಿಕ್ರಿಯಿಸಿ (+)