ಶುಕ್ರವಾರ, ಆಗಸ್ಟ್ 6, 2021
25 °C

ಕೊರೊನಾ ಸೇನಾನಿಗಳಿಗೆ ಪುಷ್ಪಾಲಂಕಾರ ಮೂಲಕ ಗೌರವಾರ್ಪಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ಸೇನಾನಿಗಳಿಗೆ ಪುಷ್ಪಾಲಂಕಾರದ ಮೂಲಕ ವಿಶಿಷ್ಟವಾಗಿ ಗೌರವ ಸಮರ್ಪಣೆ ಕಾರ್ಯಕ್ರಮ ಗುರುವಾರ ವಿಧಾಸಸೌಧದ ಮುಂಭಾಗ ನಡೆಯಿತು.

ತೋಟಗಾರಿಕೆ ಇಲಾಖೆ ಸಹಭಾಗಿತ್ವದಲ್ಲಿ ಪ್ಲವರ್ ಕೌನ್ಸಿಲ್ ಆಫ್ ಇಂಡಿಯಾ ಆಯೋಜಿಸಿದ ಕಾರ್ಯಕ್ರಮವನ್ನು ತೋಟಗಾರಿಕಾ ಸಚಿವ ನಾರಾಯಣ ಗೌಡ ಉದ್ಘಾಟಿಸಿದರು.

1 ಲಕ್ಷದ 72 ಸಾವಿರ ಹೂಗಳನ್ನು ಬಳಸಿ ಅಲಂಕಾರ ಮಾಡಲಾಗಿದೆ. ಬೆಂಗಳೂರಿನ ವಿವಿಧೆಡೆ ಇಂದಿನಿಂದ ಮೂರು ದಿನಗಳ ಕಾಲ ಪುಷ್ಪಾಲಂಕರದ ಮೂಲಕ ಗೌರವ ಸಮರ್ಪಣೆ ಮಾಡಲಾಗುವುದು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ, ತೋಟಗಾರಿಕೆ ಇಲಾಖೆ ನಿರ್ದೇಶಕ ವೆಂಕಟೇಶ್ ಮತ್ತಿತರರು ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು