ಶನಿವಾರ, ಸೆಪ್ಟೆಂಬರ್ 18, 2021
30 °C

ಹಾಪ್‌ಕಾಮ್ಸ್‌: ಇಂದಿನಿಂದ ವಿಶೇಷ ರಿಯಾಯಿತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣಾ ಸಂಘವು (ಹಾಪ್‌ಕಾಮ್ಸ್‌) ಸ್ವಾತಂತ್ರ್ಯ ದಿನ ಮತ್ತು ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಕೆಲ ಹಣ್ಣು ಮತ್ತು ತರಕಾರಿ ಉತ್ಪನ್ನಗಳ ಮೇಲೆ ವಿಶೇಷ ರಿಯಾಯಿತಿ ಘೋಷಿಸಿದೆ.

‘ಪ್ರಸ್ತುತ ಮಾರುಕಟ್ಟೆಯಲ್ಲಿ ಹಣ್ಣು–ತರಕಾರಿಗಳ ದರ ಏರಿದೆ. ಆದರೆ, ಹಾಪ್‌ಕಾಮ್ಸ್‌ ಬೆಲೆ ಹೆಚ್ಚಿಸುವುದಿಲ್ಲ. ವರಮಹಾಲಕ್ಷ್ಮಿ ಹಬ್ಬ ಸಮೀಪಿಸುತ್ತಿರುವುದರಿಂದ ಗ್ರಾಹಕರಿಗಾಗಿ ವಿಶೇಷ ರಿಯಾಯಿತಿ ದರಗಳಲ್ಲಿ ಹಣ್ಣು ಮತ್ತು ತರಕಾರಿಗಳನ್ನು ಮಾರಾಟ ಮಾಡಲು ಸಂಸ್ಥೆ ನಿರ್ಧರಿಸಿದೆ’ ಎಂದು ಹಾಪ್‌ಕಾಮ್ಸ್‌ ವ್ಯವಸ್ಥಾಪಕ ನಿರ್ದೇಶಕ ಉಮೇಶ್ ಎಸ್.ಮಿರ್ಜಿ ತಿಳಿಸಿದರು.

‘ಆ.13ರಿಂದ 20ರವರೆಗೆ ಈ ರಿಯಾಯಿತಿ ಇರಲಿದೆ. ಕೋವಿಡ್ ಪರಿಸ್ಥಿತಿ ಇರುವುದರಿಂದ ಗ್ರಾಹಕರು ಜನಸಂದಣಿ ಸ್ಥಳಗಳಲ್ಲಿ ಖರೀದಿಸುವ ಬದಲಿಗೆ ಸಂಸ್ಥೆಯ ಮಳಿಗೆಗಳಲ್ಲೇ ಅಂತರ ಕಾಯ್ದುಕೊಂಡು ಉತ್ಪನ್ನಗಳನ್ನು ಖರೀದಿಸುವ ವ್ಯವಸ್ಥೆ ಕಲ್ಪಿಸಿದ್ದೇವೆ’ ಎಂದರು. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು