ಹೊರಗುತ್ತಿಗೆ ನೌಕರರನ್ನು ಕಾಯಂಗೊಳಿಸಲು ಒತ್ತಾಯ

7
ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಪ್ರತಿಭಟನೆ

ಹೊರಗುತ್ತಿಗೆ ನೌಕರರನ್ನು ಕಾಯಂಗೊಳಿಸಲು ಒತ್ತಾಯ

Published:
Updated:
ಮಂಗಳವಾರ ಏಳನೇ ದಿನಕ್ಕೆ ಕಾಲಿರಿಸಿದ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಅನಿರ್ದಿಷ್ಟಾವಧಿ ಸಾಮೂಹಿಕ ಧರಣಿಯಲ್ಲಿ ಅಸ್ವಸ್ಥಗೊಂಡ ಬಸವ ಕಲ್ಯಾಣದ ಉಲ್ಕಾಬಾಯಿ ಅವರನ್ನು ಆಂಬುಲೆನ್ಸ್‌ನಲ್ಲಿ ಕರೆದೊಯ್ಯಲಾಯಿತು

ಬೆಂಗಳೂರು: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಡೆಸುತ್ತಿರುವ ಹಾಸ್ಟೆಲ್‍ಗಳ ‘ಡಿ’ ವರ್ಗದ ಹೊರಗುತ್ತಿಗೆ ನೌಕರರನ್ನು ಕಾಯಂಗೊಳಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಆಗ್ರಹಿಸಿದೆ.

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಅನಿರ್ದಿಷ್ಟಾವಧಿ ಸಾಮೂಹಿಕ ಧರಣಿ ಮಂಗಳವಾರ ಏಳನೇ ದಿನಕ್ಕೆ ಕಾಲಿರಿಸಿದೆ.  ‘ಸಂಘದ ಅಧ್ಯಕ್ಷ ನಿತ್ಯಾನಂದ ಸ್ವಾಮಿ ಮಾತನಾಡಿ, ‘ಹೊಸದಾಗಿ ನೇಮಕಗೊಳ್ಳುವ ಕಾಯಂ ನೌಕರರನ್ನು ಹೊಸ ಹಾಸ್ಟೆಲ್‍ಗಳಿಗೆ ಮಾತ್ರ ನಿಯೋಜಿಸುತ್ತೇವೆ. ಹಾಲಿ ಹೊರಗುತ್ತಿಗೆ ನೌಕರರ ನಿವೃತ್ತಿವರೆಗೆ ಸೇವಾ ಭದ್ರತೆ ನೀಡುವ ಕುರಿತು ಪರಿಶೀಲಿಸಲಾಗುವುದು ಎಂದು ಈ ಹಿಂದೆ ಸರ್ಕಾರ ಭರವಸೆ ನೀಡಿತ್ತು’.

‘ಆದರೆ, ಇದೀಗ ನೇರ ನೇಮಕಾತಿಯಲ್ಲಿ ಆಯ್ಕೆಯಾದವರನ್ನು ಕೆಲಸಕ್ಕೆ ಸೇರಿಸಿಕೊಂಡು ಹೊರಗುತ್ತಿಗೆ ನೌಕರರನ್ನು ತೆಗೆದು ಹಾಕುತ್ತಿದ್ದಾರೆ. ಕೆಲಸಕ್ಕೆ ಹಾಜರಾದ ನೇರ ನೇಮಕಾತಿ ಸಿಬ್ಬಂದಿ ಬದಲು ಆಳುಗಳನ್ನು ಕರೆಸಿ ಕೆಲಸ ಮಾಡಿಸುತ್ತಿರುವುದು ಖಂಡನೀಯ’ ಎಂದು ಅವರು ಆರೋಪಿಸಿದರು. 

‘ಸುಮಾರು 5000 ಹೊರಗುತ್ತಿಗೆ ನೌಕರರು ಕೆಲಸ ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ ಕೂಡಲೇ ನೌಕರರಿಗೆ ಮರಳಿ ಕೆಲಸ ಕೊಡಬೇಕು, ನಿವೃತ್ತಿವರೆಗೂ ಸೇವಾ ಭದ್ರತೆ ನೀಡಿ, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು... ಇತ್ಯಾದಿ ಬೇಡಿಕೆಗಳನ್ನು ಶೀಘ್ರವೇ ಇಡೇರಿಸಬೇಕು’ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಭೀಮಶೆಟ್ಟಿ ಯಂಪಳ್ಳಿ ಆಗ್ರಹಿಸಿದರು. 

‘ಬೇಡಿಕೆ ಇಡೇರುವವರೆಗೂ ಪ್ರತಿಭಟನೆಯನ್ನು ಕೈ ಬಿಡುವುದಿಲ್ಲ’ ಎಂದು ಸಂಘದ ಸಹ ಕಾರ್ಯದರ್ಶಿ ಕೆ. ಹನುಮೇಗೌಡ ತಿಳಿಸಿದರು.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !