ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಹೋಟೆಲ್‌ಗೆ ನುಗ್ಗಿ ಚಾಕು ತೋರಿಸಿ ಬೆದರಿಕೆ

Published 29 ಏಪ್ರಿಲ್ 2024, 15:30 IST
Last Updated 29 ಏಪ್ರಿಲ್ 2024, 15:30 IST
ಅಕ್ಷರ ಗಾತ್ರ

ಬೆಂಗಳೂರು: ಬಾಣಸವಾಡಿ ಠಾಣೆ ವ್ಯಾಪ್ತಿಯಲ್ಲಿರುವ ಹೋಟೆಲ್‌ವೊಂದಕ್ಕೆ ನುಗ್ಗಿದ್ದ ಮೂವರು ದುಷ್ಕರ್ಮಿಗಳು, ಮಾಲೀಕರು ಹಾಗೂ ಸಿಬ್ಬಂದಿಗೆ ಚಾಕು ತೋರಿಸಿ ಜೀವ ಬೆದರಿಕೆಯೊಡ್ಡಿ ಸುಲಿಗೆಗೆ ಯತ್ನಿಸಿ ಪರಾರಿಯಾಗಿದ್ದಾರೆ.

ಭಾನುವಾರ ರಾತ್ರಿ ನಡೆದಿರುವ ಆರೋಪಿಗಳ ಕೃತ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದೇ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿರುವ ಹೋಟೆಲ್ ಮಾಲೀಕ, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ.

‘ಕಮ್ಮನಹಳ್ಳಿಯಲ್ಲಿರುವ ಹೋಟೆಲ್‌ಗೆ ಮೂವರು ದುಷ್ಕರ್ಮಿಗಳು ನುಗ್ಗಿದ್ದರು. ಕೌಂಟರ್‌ನಲ್ಲಿದ್ದ ಮಾಲೀಕನ ಜೊತೆ ಸುಖಾಸುಮ್ಮನೇ ಜಗಳ ತೆಗೆದಿದ್ದರು. ಅದನ್ನು ಪ್ರಶ್ನಿಸಿದ್ದಕ್ಕೆ ಚಾಕು ತೋರಿಸಿ ಕೊಲೆ ಬೆದರಿಕೆಯೊಡ್ಡಿದ್ದರು. ಸಿಬ್ಬಂದಿಯನ್ನೂ ಬೆದರಿಸಿ ಸುಲಿಗೆಗೆ ಯತ್ನಿಸಿದ್ದರು. ಜನರು ಸೇರುತ್ತಿದ್ದಂತೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ’ ಎಂದು ಮೂಲಗಳು ಹೇಳಿವೆ.

‘ದುಷ್ಕರ್ಮಿಗಳು ಹೋಟೆಲ್‌ಗೆ ಆಗಾಗ ಬಂದು ಬೆದರಿಕೆ ಹಾಕುತ್ತಿರುವ ಘಟನೆಗಳು ನಡೆಯುತ್ತಿರುವ ಬಗ್ಗೆ ಮಾಲೀಕರು ತಿಳಿಸಿದ್ದಾರೆ. ಹೋಟೆಲ್‌ನಲ್ಲಿ ನಡೆದಿರುವ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT