ಭಾನುವಾರ, ಆಗಸ್ಟ್ 1, 2021
27 °C

ಕಾರಿನ ಗಾಜು ಒಡೆದು ಚಾಕುವಿನಿಂದ ಇರಿದು ಸುಲಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಾರತಿನಗರ ಠಾಣೆ ವ್ಯಾಪ್ತಿಯಲ್ಲಿ ಹೋಟೆಲ್ ಉದ್ಯಮಿಯೊಬ್ಬರ ಕಾರು ಅಡ್ಡಗಟ್ಟಿ ಸುಲಿಗೆ ಮಾಡಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

‘ಶುಕ್ರವಾರ ರಾತ್ರಿ 10.30ರ ಸುಮಾರಿಗೆ ನಡೆದಿರುವ ಘಟನೆ ಸಂಬಂಧ ಉದ್ಯಮಿ ದಿನೇಶ್ ವಾಸುದೇವ ಕಲ್ರಾ ಎಂಬುವರು ದೂರು ನೀಡಿದ್ದಾರೆ. ನಾಲ್ವರು ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

‘ದೂರುದಾರ ದಿನೇಶ್ ಕೆಲಸ ಮುಗಿಸಿಕೊಂಡು ಕಾರಿನಲ್ಲಿ ಮನೆಯತ್ತ ಹೊರಟಿದ್ದರು. ಅವರನ್ನು ಹಿಂಬಾಲಿಸಿದ್ದ ದುಷ್ಕರ್ಮಿಗಳು, ಮಾರ್ಗಮಧ್ಯೆಯೇ ಕಾರು ಅಡ್ಡಗಟ್ಟಿದ್ದರು. ಕಿಟಕಿ ಗಾಜು ಒಡೆದು ದಿನೇಶ್ ಅವರ ಬಲಗೈಗೆ ಚಾಕುವಿನಿಂದ ಇರಿದಿದ್ದರು. ನಂತರ, ₹50 ಸಾವಿರ ನಗದು ಹಾಗೂ ಎರಡು ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ’ ಎಂದು ತಿಳಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು