ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೇಷಾದ್ರಿ ರಸ್ತೆಯ ಮೇಲ್ಸೇತುವೆಯಿಂದ ಜಿಗಿದು ಹೋಟೆಲ್ ಕೆಲಸಗಾರ ಆತ್ಮಹತ್ಯೆ

Published 24 ಏಪ್ರಿಲ್ 2024, 16:03 IST
Last Updated 24 ಏಪ್ರಿಲ್ 2024, 16:03 IST
ಅಕ್ಷರ ಗಾತ್ರ

ಬೆಂಗಳೂರು: ಆನಂದರಾವ್ ವೃತ್ತಕ್ಕೆ ಹೊಂದಿಕೊಂಡಿರುವ ಶೇಷಾದ್ರಿ ರಸ್ತೆಯ ಮೇಲ್ಸೇತುವೆಯಿಂದ ಜಿಗಿದು ತಿಮ್ಮರಾಜು (32) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಹಾಸನದ ತಿಮ್ಮರಾಜು, ನಗರದ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ವಿಜಯನಗರದಲ್ಲಿ ಕುಟುಂಬದ ಜೊತೆ ವಾಸವಿದ್ದರು. ಇವರ ಸಾವಿನ ಬಗ್ಗೆ ಯುಡಿಆರ್ (ಅಸಹಜ ಸಾವು) ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಉಪ್ಪಾರಪೇಟೆ ಠಾಣೆ ಪೊಲೀಸರು ಹೇಳಿದರು.

‘ಬುಧವಾರ ನಸುಕಿನಲ್ಲಿ ಮೇಲ್ಸೇತುವೆ ಬಳಿ ಬಂದಿದ್ದ ತಿಮ್ಮರಾಜು, ಅಲ್ಲಿಂದ ಕೆಳಗಿನ ರಸ್ತೆಗೆ ಜಿಗಿದಿದ್ದರು. ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.’

‘ತಿಮ್ಮರಾಜು ಹಲವರ ಬಳಿ ಸಾಲ ಮಾಡಿದ್ದರೆಂದು ಗೊತ್ತಾಗಿದೆ. ಸಾಲ ವಾಪಸು ನೀಡಲು ಸಾಧ್ಯವಾಗಿರಲಿಲ್ಲ. ಸಾಲ ಕೊಟ್ಟವರು, ವಾಪಸು ನೀಡುವಂತೆ ಕಿರುಕುಳ ನೀಡಲಾರಂಭಿಸಿದ್ದರು. ಇದರಿಂದ ಬೇಸತ್ತ ತಿಮ್ಮರಾಜು, ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನವಿದೆ. ಕುಟುಂಬಸ್ಥರು ಹಾಗೂ ಸ್ನೇಹಿತರ ಹೇಳಿಕೆ ಪಡೆಯಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT