ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪೆಟ್ರೋಲ್‌, ಡೀಸೆಲ್‌ ದರ ಇಳಿಸಲು ಹೋಟೆಲ್‌ಗಳ ಸಂಘ ಆಗ್ರಹ

Published : 21 ಸೆಪ್ಟೆಂಬರ್ 2024, 19:30 IST
Last Updated : 21 ಸೆಪ್ಟೆಂಬರ್ 2024, 19:30 IST
ಫಾಲೋ ಮಾಡಿ
Comments

ಬೆಂಗಳೂರು: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾದರೂ ದೇಶದಲ್ಲಿ ಅವುಗಳ ಬೆಲೆ ಇಳಿಕೆಯಾಗುತ್ತಿಲ್ಲ ಎಂದು ಬೃಹತ್‌ ಬೆಂಗಳೂರು ಹೋಟೆಲ್‌ಗಳ ಸಂಘ ದೂರಿದೆ.

‘ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಬ್ಯಾರೆಲ್‌ ಕಚ್ಚಾ ತೈಲದ ಬೆಲೆ 72 ಡಾಲರ್‌ ಇದೆ. ಹೀಗಿದ್ದರೂ ದೇಶದಲ್ಲಿ ಡಿಸೇಲ್‌ ಮತ್ತು ಪೆಟ್ರೋಲ್‌ ಬೆಲೆ ಕಡಿಮೆಯಾಗಿಲ್ಲ. ಸದ್ಯ ಪ್ರತಿ ಲೀಟರ್‌ಗೆ ₹102.86 ಹಾಗೂ ಡೀಸೆಲ್‌ ₹88.94ರಂತೆ ಮಾರಾಟವಾಗುತ್ತಿದೆ. ಇದರ ಮೇಲೆ ಕೇಂದ್ರ ಸರ್ಕಾರ ಶೇಕಡ 20ರಷ್ಟು ಹಾಗೂ ರಾಜ್ಯ ಸರ್ಕಾರ ಶೇ 29.84ರಷ್ಟು ತೆರಿಗೆ ವಿಧಿಸುತ್ತಿವೆ. ಇದರಿಂದ ಜನಸಾಮಾನ್ಯರಿಗೆ ಹಾಗೂ ಉದ್ಯಮಿಗಳಿಗೆ ಹೊರೆ ಆಗುತ್ತಿದೆ’ ಎಂದು ಸಂಘದ ಗೌರವ ಅಧ್ಯಕ್ಷ ಪಿ.ಸಿ. ರಾವ್‌ ತಿಳಿಸಿದ್ದಾರೆ.

‘ತೈಲ ದರ ಏರಿಕೆಯಿಂದ ಹಾಲು, ದವಸ–ಧಾನ್ಯ ಮುಂತಾದವುಗಳ ಸಾಗಣೆ ವೆಚ್ಚವು ಹೆಚ್ಚಾಗುವ ಜೊತೆಗೆ

ಪ್ರವಾಸೋದ್ಯಮಕ್ಕೂ ಹೊಡೆತ ಬೀಳುತ್ತಿದೆ. ಅವೈಜ್ಞಾನಿಕ ದರ ಏರಿಕೆ ಮಾಡಿ ಜನಸಾಮಾನ್ಯರು ಹಾಗೂ ಉದ್ಯಮಿಗಳ ಮೇಲೆ ಹೊರೆ ಹಾಕುವುದು ಸರಿಯಲ್ಲ. ಕೂಡಲೇ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಇಳಿಕೆ ಮಾಡುವುದರ ಜೊತೆಗೆ ಇದನ್ನು ಜಿಎಸ್‌ಟಿ ಅಡಿಯಲ್ಲಿ ತರಬೇಕು’ ಎಂದು ಸಂಘದ ಅಧ್ಯಕ್ಷ ಸುಬ್ರಮಣ್ಯ ಹೊಳ್ಳ ಎಸ್., ಗೌರವ ಕಾರ್ಯದರ್ಶಿ ವೀರೇಂದ್ರ ಎನ್. ಕಾಮತ್‌ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT