ಬೆಂಗಳೂರು: ಮನೆಗಳ್ಳತನ ಮಾಡಿ ಆಭರಣಗಳನ್ನು ಕೊಯಮತ್ತೂರಿನಲ್ಲಿ ಮಾರಾಟ ಮಾಡಿದ ಆರೋಪಿಯನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿ, 100 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ತಮಿಳುನಾಡಿನ ಕಾರ್ತಿಕ್ ಎಂಬಾತನನ್ನು ಬಂಧಿಸಿ, ₹10 ಲಕ್ಷ ಮೌಲ್ಯದ ಆಭರಣ ಜಪ್ತಿ ಮಾಡಲಾಗಿದೆ.

ಠಾಣಾ ವ್ಯಾಪ್ತಿಯ ವಿದ್ಯಾಪೀಠ ರಸ್ತೆಯ ನಿವಾಸಿಯೊಬ್ಬರು ವರ ಮಹಾಲಕ್ಷ್ಮೀ ಹಬ್ಬದ ನಿಮಿತ್ತ ಪೂಜಾ ಸಾಮಗ್ರಿಗಳನ್ನು ಖರೀದಿಸಲು ಮನೆಗೆ ಬೀಗ ಹಾಕಿಕೊಂಡು ಹೋಗಿದ್ದರು. ಈ ವೇಳೆ ಆರೋಪಿಗಳು ಮನೆಯ ಬೀಗ ಮುರಿದು, ಬೀರುವಿನಲ್ಲಿಟ್ಟಿದ್ದ 55 ಗ್ರಾಂ ಚಿನ್ನಾಭರಣ ಹಾಗೂ ₹6 ಸಾವಿರ ನಗದು ಕಳ್ಳತನ ಮಾಡಿ ಪರಾರಿಯಾಗಿದ್ದರು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು, ಖಚಿತ ಮಾಹಿತಿ ಆಧರಿಸಿ, ತಮಿಳುನಾಡಿನ ಉಕ್ಕಡಂನಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಮನೆಗಳ್ಳತನ ಮಾಡಿರುವುದು ಗೊತ್ತಾಗಿದೆ. ಕದ್ದ ಆಭರಣಗಳನ್ನು ಕೊಯಮತ್ತೂರಿನಲ್ಲಿರುವ ಆಭರಣ ಅಂಗಡಿಯಲ್ಲಿ ಮಾರಾಟ ಮಾಡಿರುವುದಾಗಿ ತಿಳಿಸಿದ್ದು, ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ಆರೋಪಿಯು ತಮಿಳುನಾಡಿನ 28 ಕಡೆ ಕಳ್ಳತನ ಮಾಡಿದ್ದು, ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ತಿಂಗಳಷ್ಟೇ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದ ಆರೋಪಿ, ಮತ್ತೆ ಕಳ್ಳತನಕ್ಕಿಳಿದಿದ್ದ. ಈತನ ಬಂಧನದಿಂದ ಕೆಂಗೇರಿ ಪೊಲೀಸ್ ಠಾಣೆಯ 2, ರಾಜಾಜಿನಗರ ಹಾಗೂ ಬಂಡೆಪಾಳ್ಯ ಠಾಣೆಯ ತಲಾ ಒಂದು ಕಳವು ಪ್ರಕರಣ ಸೇರಿ ನಾಲ್ಕು ಪ್ರಕರಣಗಳು ಪತ್ತೆಯಾಗಿವೆ. ವಿಲಾಸಿ ಜೀವನ ನಡೆಸಲು ಕಳ್ಳತನ ಮಾಡುತ್ತಿರುವುದು ತನಿಖೆ ವೇಳೆ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.