ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರ್ತಪೇಟೆಯಲ್ಲಿ ಕುಸಿದ ಮನೆ ಗೋಡೆ

Last Updated 13 ಅಕ್ಟೋಬರ್ 2021, 9:51 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಸತತ ಸುರಿಯುತ್ತಿರುವ ಮಳೆಯಿಂದ ನಗರ್ತಪೇಟೆಯಲ್ಲಿ ಹಳೆಯ ಹೆಂಚಿನ ಮನೆಯೊಂದರ ಗೋಡೆ ಕುಸಿದು ಬಿದ್ದಿದ್ದು, ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ.

ಧರ್ಮರಾಯಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಸುಮಾರು 90 ವರ್ಷ ಹಳೆಯಾದಾದ ಈ ಮನೆಯ ಒಂದು ಕಡೆಯ ಗೋಡೆ ಕುಸಿದಿದೆ. 6 ವರ್ಷದಿಂದ ಮನೆಯಲ್ಲಿ ಯಾರೂ ವಾಸ ಇರಲಿಲ್ಲ. ಹೀಗಾಗಿ, ಯಾವುದೇ ಹಾನಿಯಾಗಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಅವಶೇಷ ತೆರವುಗೊಳಿಸುವ ಕಾರ್ಯ ಆರಂಭಿಸಲಾಗಿದೆ. ಉಳಿದಿರುವ ಗೊಡೆಗಳನ್ನೂ ನೆಲಸಮ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ನಗರದಲ್ಲಿ ಕುಸಿಯುವ ಹಂತದಲ್ಲಿರುವ 185 ಮನೆಗಳ ಸರ್ವೆಯನ್ನುಎರಡು ವರ್ಷಗಳ ಹಿಂದೆಯೇ ಮಾಡಲಾಗಿದೆ. 10 ಕಟ್ಟ ನೆಲಸಮ ಮಾಡಲಾಗಿದ್ದು, ಉಳಿದವುಗಳನ್ನು ನೆಲಸಮ ಮಾಡಲು ಮತ್ತೆ ಸರ್ವೆ ನಡೆಸಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT