ಶನಿವಾರ, ಫೆಬ್ರವರಿ 22, 2020
19 °C

ಗೋಮಾಳದಲ್ಲಿ ಮನೆ: ತೆರವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾಬಸ್‌ಪೇಟೆ: ಸೋಂಪುರ ಕೈಗಾರಿಕಾ ಪ್ರದೇಶಕ್ಕೆ ಹೊಂದಿಕೊಂಡಂತಿರುವ ಎಡೇಹಳ್ಳಿ ಸರ್ಕಾರಿ ಗೋಮಾಳದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಮೀಸಲಾಗಿದ್ದ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮನೆಗಳ ತೆರವು ಕಾರ್ಯಾಚರಣೆ ಶನಿವಾರ ಪೊಲೀಸರು ಮತ್ತು ಕಂದಾಯ ಅಧಿಕಾರಿಗಳ ಸಮ್ಮುಖದಲ್ಲಿ ನಡೆಯಿತು. 

ಸರ್ವೇ ನಂ. 61 ಹಾಗೂ 62ರಲ್ಲಿ ಆರು ಎಕರೆ ಹತ್ತು ಗುಂಟೆ ಜಾಗವನ್ನು ಕೃಷಿ ಉತ್ಪನ್ನ ಮಾರುಕಟ್ಟೆ ನಿರ್ಮಾಣಕ್ಕೆ ಸರ್ಕಾರ ನೀಡಿದ್ದು, ಮಾರುಕಟ್ಟೆ ನಿರ್ಮಾಣಕ್ಕೆ ನಬಾರ್ಡ್ ಅಡಿ ₹5ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ.

ಸುಮಾರು 250ಕ್ಕೂ ಹೆಚ್ಚು ಮಂದಿ ಇಲ್ಲಿ ಮನೆ ನಿರ್ಮಿಸಿಕೊಂಡಿದ್ದಾರೆ. ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಪೊಲೀಸ್‌ ಭದ್ರತೆಯೊಂದಿಗೆ ಕಾರ್ಯಾಚರಣೆ ಕೈಗೊಳ್ಳಲಾಯಿತು. 

ಶಾಸಕ ಡಾ. ಕೆ. ಶ್ರೀನಿವಾಸ ಮೂರ್ತಿ, ‘ಪರಿಶೀಲನೆ ನಡೆಸದೆ ಹಿಂದಿನ ಜಿಲ್ಲಾಧಿಕಾರಿಗಳು ಎಪಿಎಂಸಿಗೆ ಜಾಗ ನಿಗದಿಗೊಳಿಸಿದ್ದರು. ಈಗ ಇಲ್ಲಿ ನಿರ್ಗತಿಕರು, ಬಡವರು ವಾಸಿಸುತ್ತಿದ್ದಾರೆ. ಅವರು ಎಲ್ಲಿಗೆ ಹೋಗಬೇಕು. ಎಪಿಎಂಸಿಗೆ ಮೀಸಲಾದ ಜಾಗ ಬಿಟ್ಟು, ಮುಂದಿನ ಉಳಿಕೆ ಜಾಗದಲ್ಲಿ ಇಲ್ಲಿನ ಕಡುಬಡವರಿಗೆ ನಿವೇಶನ ನೀಡಿ’ ಎಂದು ತಹಶೀಲ್ದಾರ್‌ಗೆ ತಿಳಿಸಿದರು. 

‘ಬಡವರ ಮೇಲೆ ಹೀಗೆ ಏಕಾಏಕಿ ಪ್ರಹಾರ ನಡೆಸುವುದು ಸರಿಯಲ್ಲ, ಒಡವೆ ಅಡವಿಟ್ಟು, ಸಾಲ ಮಾಡಿ ಮನೆ ಕಟ್ಟಿಕೊಂಡಿದ್ದೆವು. ಈಗ ಬೀದಿಗೆ ಬೀಳುವಂತಾಗಿದೆ’ ಎಂದು ಸಂತ್ರಸ್ತರು ಅಳಲು ತೋಡಿಕೊಂಡರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು