ಶನಿವಾರ, ಆಗಸ್ಟ್ 20, 2022
21 °C
43 ಸಾವಿರ ಮನೆಗಳ ನಿರ್ಮಾಣ ಕಾಮಗಾರಿ ಶುರು

ವರ್ಷದೊಳಗೆ ಬೆಂಗಳೂರಿನ ಬಡವರಿಗೆ 30,000 ಮನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ’ ಯೋಜನೆಯಡಿ ನಗರದಲ್ಲಿ ಬಡವರಿಗೆ ವರ್ಷದೊಳಗೆ 30,000 ಮನೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.

ಬುಧವಾರ ವಿಕಾಸಸೌಧದಲ್ಲಿ ವಸತಿ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯೋಜನೆಯಡಿ 43,000 ಮನೆಗಳ ನಿರ್ಮಾಣ ಕಾಮಗಾರಿ ಈಗಾಗಲೇ ಆರಂಭವಾಗಿದೆ. ಎರಡನೇ ಹಂತದಲ್ಲಿ 35,000 ಮನೆಗಳ ನಿರ್ಮಾಣಕ್ಕೆ ಮುಂದಿನ ವಾರ ಟೆಂಡರ್‌ ಪ್ರಕ್ರಿಯೆ ಆರಂಭಿಸಲಾಗುವುದು ಎಂದರು.

ಯೋಜನೆಗೆ 900 ಎಕರೆ ಜಮೀನು ಅಗತ್ಯವಿದೆ. ಇದಕ್ಕಾಗಿ 221 ಎಕರೆ ಜಮೀನನ್ನು ವಸತಿ ಇಲಾಖೆ ಪಡೆದುಕೊಂಡಿದೆ. ಇನ್ನೂ 351 ಎಕರೆ ಜಮೀನನ್ನು ಗುರುತಿಸಿದ್ದು, 328 ಜಮೀನು ಗುರುತಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ಸಂಬಂಧ ಬೆಂಗಳೂರು ನಗರ ಜಿಲ್ಲಾಧಿಕಾರಿ, ತಹಶೀಲ್ದಾರ್‌ ಮತ್ತು ಭೂಮಾಪನ ಇಲಾಖೆಯ ಅಧಿಕಾರಿಗಳ ಸಭೆ ನಡೆಸಲಾಗಿದೆ ಎಂದು ತಿಳಿಸಿದರು.

‘ಈ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿದ್ದೇನೆ. ನಮ್ಮ ಸರ್ಕಾರ ಬಂದ ಬಳಿಕ ಯೋಜನೆಗೆ ವೇಗ ದೊರಕಿದೆ. ಮುಂದಿನ ವರ್ಷದ ಜೂನ್‌ ಒಳಗಾಗಿ 30,000 ಮನೆಗಳನ್ನು ಹಂಚಿಕೆ ಮಾಡಲಾಗುವುದು. 2022ರಲ್ಲಿ ಉಳಿದ 70,000 ಮನೆಗಳ ಹಂಚಿಕೆ ನಡೆಯಲಿದೆ. 2021ರ ಜೂನ್ ಒಳಗೆ 30,000 ಮನೆಗಳ ಹಂಚಿಕೆಯಾಗದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ’ ಎಂದು
ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು