ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಸತಿ ಯೋಜನೆ: ಅವಧಿ ವಿಸ್ತರಣೆ

Last Updated 6 ಜುಲೈ 2018, 19:28 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಧಾನಮಂತ್ರಿ ಆವಾಸ್‌ ಯೋಜನೆಗೆ ಹೆಸರು ನೋಂದಾಯಿಸಿಕೊಳ್ಳುವ ಅವಧಿಯನ್ನು ಈ ತಿಂಗಳ 30ರವರೆಗೆ ವಿಸ್ತರಿಸಲಾಗಿದೆ.

ವಸತಿ ಸಚಿವ ಯು.ಟಿ. ಖಾದರ್‌, ವಿಧಾನಸಭೆಯಲ್ಲಿ ಶುಕ್ರವಾರ ಈ ಮಾಹಿತಿ ನೀಡಿದರು. ‘ಆನ್‌ಲೈನ್‌ ಮೂಲಕ ಹೆಸರು ನೋಂದಣಿ ಮಾಡಿಕೊಳ್ಳಲಾಗುತ್ತಿದೆ. ದಾಖಲೆ ಅಪ್‌ಲೋಡ್‌ ಮಾಡುವುದು ಸೇರಿದಂತೆ ಒಂದು ನೋಂದಣಿ ಪ್ರಕ್ರಿಯೆಗೆ ₹ 100 ಶುಲ್ಕ ನಿಗದಿ ಮಾಡಲಾಗಿದೆ. ಈಗಾಗಲೇ 15 ಲಕ್ಷ ಫಲಾನುಭವಿಗಳನ್ನು ಗುರುತಿಸಲಾಗಿದೆ’ ಎಂದು ತಿಳಿಸಿದರು.

ಯೋಜನೆ ಅಡಿಯಲ್ಲಿ ಮನೆ ಕಟ್ಟಿಕೊಳ್ಳಲು ಪ್ರತಿಯೊಬ್ಬ ಫಲಾನುಭವಿಗೆ ₹ 1.20 ಲಕ್ಷ ನೆರವು (ಕೇಂದ್ರದಿಂದ ₹ 72 ಸಾವಿರ, ರಾಜ್ಯದಿಂದ ₹ 48 ಸಾವಿರ) ಸಿಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT