ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ ಪೊಲೀಸರಿಗೆ ರಿವಾಲ್ವರ್ ತೋರಿಸಿ ಪರಾರಿಯಾಗಿದ್ದ ಡ್ರಗ್ ಪೆಡ್ಲರ್ ಬಂಧನ

Last Updated 10 ಸೆಪ್ಟೆಂಬರ್ 2022, 4:17 IST
ಅಕ್ಷರ ಗಾತ್ರ

ಬೆಂಗಳೂರು: ತನ್ನನ್ನು ಬಂಧಿಸಲು ಬಂದ ಕೇರಳ ಪೊಲೀಸರಿಗೆ ರಿವಾಲ್ವರ್‌ನಿಂದ ಬೆದರಿಸಿ ಪರಾರಿಯಾಗಿದ್ದ ಆರೋಪಿ ಜಾಫರ್ ಎಂಬುವರನ್ನು ನಗರದ ಎಚ್‌ಎಸ್‌ಆರ್‌ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಕೇರಳದ ಜಾಫರ್, ತನ್ನೂರಿನಿಂದ ತಪ್ಪಿಸಿಕೊಂಡು ಬೆಂಗಳೂರಿಗೆ ಬಂದಿದ್ದ. ತನ್ನನ್ನು ಹಿಡಿಯಲು ಬಂದ ಪೊಲೀಸರನ್ನು ಬೆದರಿಸಿದ್ದ. ಪ್ರಕರಣ ದಾಖಲಾಗುತ್ತಿದ್ದಂತೆ ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ಕುರತಿಕ್ಕಾಡ್ ಠಾಣೆಯಲ್ಲಿ ಪ್ರಕರಣ: ‘ಡ್ರಗ್ಸ್ ಮಾರಾಟ ಜಾಲದ ರೂವಾರಿ ಜಾಫರ್, ಕೇರಳದಲ್ಲಿ ಸಹಚರರ ಮೂಲಕ ಮಾದಕ ವಸ್ತು ಮಾರಾಟ ಮಾಡಿಸುತ್ತಿದ್ದ. ಈತನ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಕುರತಿಕ್ಕಾಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿ ಪತ್ತೆಗಾಗಿ ಕುರತಿಕ್ಕಾಡ್ ಪಿಎಸ್‌ಐ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಬಂಧನ ಭೀತಿಯಲ್ಲಿದ್ದ ಆರೋಪಿ ಜಾಫರ್, ಸಹಚರರ ಸಮೇತ ಕೇರಳ ತೊರೆದು ಬೆಂಗಳೂರಿಗೆ ಬಂದಿದ್ದ. ಈತನನ್ನು ಹುಡುಕಿಕೊಂಡು ಪಿಎಸ್‌ಐ ನೇತೃತ್ವದ ತಂಡವೂ ಬೆಂಗಳೂರಿಗೆ ಬಂದಿತ್ತು.’

‘ಎಚ್‌ಎಸ್‌ಆರ್ ಲೇಔಟ್ ಠಾಣೆ ವ್ಯಾಪ್ತಿಯ ಹೋಟೆಲೊಂದರಲ್ಲಿ ಆರೋಪಿ ಇತ್ತೀಚೆಗೆ ಕಾಣಿಸಿಕೊಂಡಿದ್ದ. ಮಾಹಿತಿ ತಿಳಿದ ಪಿಎಸ್‌ಐ ನೇತೃತ್ವದ ತಂಡ, ಬಂಧಿಸಲು ಮುಂದಾಗಿತ್ತು. ರಿವಾಲ್ವರ್ ತೋರಿಸಿ ಕೊಲೆ ಬೆದರಿಕೆಯೊಡ್ಡಿದ್ದ ಆರೋಪಿ, ಸಹಚರರ ಸಮೇತ ಸ್ಥಳದಿಂದ ಪರಾರಿಯಾಗಿದ್ದ’ ಎಂದು ತಿಳಿಸಿವೆ.

ಜಂಟಿ ಕಾರ್ಯಾಚರಣೆ: ‘ಆರೋಪಿ ಪರಾರಿಯಾದ ಬಗ್ಗೆ ಕುರತಿಕ್ಕಾಡ್ ಪಿಎಸ್‌ಐ, ಎಚ್‌ಎಸ್‌ಆರ್‌ ಲೇಔಟ್ ಠಾಣೆಗೆ ಮಾಹಿತಿ ನೀಡಿದ್ದರು. ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT