ಶುಕ್ರವಾರ, ಏಪ್ರಿಲ್ 23, 2021
24 °C

ಭಾರಿ ಮಳೆ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಗುರುವಾರದಿಂದ ಐದು ದಿನಗಳ ಕಾಲ ಭಾರಿ ಮಳೆ ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಈ ಸಂದರ್ಭದಲ್ಲಿ ಕರಾವಳಿ ಭಾಗದಲ್ಲಿ ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಎಚ್ಚರಿಕೆ ನೀಡಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ, ಸಾರ್ವಜನಿಕರು, ಪ್ರವಾಸಿಗರು ಕಡಲತೀರಗಳಿಗೆ ಭೇಟಿ ನೀಡುವ ವೇಳೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವಂತೆ ಅದು ಹೇಳಿಕೆಯಲ್ಲಿ ತಿಳಿಸಿದೆ.

ಹುಬ್ಬಳ್ಳಿ, ಧಾರವಾಡ, ಗದಗ ಜಿಲ್ಲೆಯ ಲಕ್ಷ್ಮೇಶ್ವರ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಬುಧವಾರ ಸಂಜೆ ಮಳೆ ಸುರಿಯಿತು.

ಕೊಡಗು ಜಿಲ್ಲೆಯಾದ್ಯಂತ ಬುಧವಾರ ಸಂಜೆಯಿಂದ ಸಾಧಾರಣ ಮಳೆಯಾಗುತ್ತಿದೆ. ಮಡಿಕೇರಿ, ತಲಕಾವೇರಿ, ನಾಪೋಕ್ಲು ಹಾಗೂ ಭಾಗಮಂಡಲ ಭಾಗದಲ್ಲೂ ಸಾಧಾರಣ ಮಳೆ ಸುರಿದಿದೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ಹಾಗೂ ಸುತ್ತಮುತ್ತಲಿನಲ್ಲಿ ಬುಧವಾರ ಮಧ್ಯಾಹ್ನ ಮಳೆಯಾಗಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.