ಭಾನುವಾರ, ಏಪ್ರಿಲ್ 5, 2020
19 °C

ನಿರ್ಣಯ ವಾಪಸ್‌ ಪಡೆದ ಹುಬ್ಬಳ್ಳಿ ವಕೀಲರ ಸಂಘ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಪಾಕಿಸ್ತಾನ್‌ ಜಿಂದಾಬಾದ್‌’ ಘೋಷಣೆ ಕೂಗಿದ ಆರೋಪದಲ್ಲಿ ಬಂಧಿತರಾಗಿರುವ ಹುಬ್ಬಳ್ಳಿಯ ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಪರ ವಕಾಲತ್ತು ಹಾಕದಿರಲು ಫೆಬ್ರುವರಿ 15ರಂದು ಕೈಗೊಂಡಿದ್ದ ನಿರ್ಣಯವನ್ನು ಹುಬ್ಬಳ್ಳಿ ವಕೀಲರ ಸಂಘ ವಾಪಸು ಪಡೆದಿದೆ.

ಈ ಕುರಿತ ಪ್ರಮಾಣ ಪತ್ರವನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಮಂಗಳವಾರ ಸಲ್ಲಿಸಿದೆ.

ಪ್ರಮಾಣ ಪತ್ರ ದಾಖಲಿಸಿಕೊಂಡ ನ್ಯಾಯಪೀಠ, ‘ಕೋರ್ಟ್ ಆವರಣದಲ್ಲಿ ಗಲಭೆ ನಡೆದ ಬಗ್ಗೆ ಈಗಾಗಲೇ ಎಫ್‌ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಾಗಾಗಿ ಈ ಹಂತದಲ್ಲಿ ಯಾವುದೇ ನಿರ್ದೇಶನ ನೀಡುವುದಿಲ್ಲ’ ಎಂದು ಹೇಳಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು