ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮ.ರಾಮಮೂರ್ತಿ ದತ್ತಿ ಪ್ರಶಸ್ತಿಗೆ‌’ ಜೆ.ಹುಚ್ಚಪ್ಪ ಆಯ್ಕೆ

Published 21 ಮೇ 2024, 0:57 IST
Last Updated 21 ಮೇ 2024, 0:57 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ 2024ರ ‘ಕನ್ನಡ ಚಳವಳಿ ವೀರ ಸೇನಾನಿ ಮ.ರಾಮಮೂರ್ತಿ ದತ್ತಿ ಪ್ರಶಸ್ತಿ’ಗೆ ಕನ್ನಡ ಹೋರಾಟಗಾರ ಜೆ.ಹುಚ್ಚಪ್ಪ ಆಯ್ಕೆಯಾಗಿದ್ದಾರೆ. ದತ್ತಿ ಪ್ರಶಸ್ತಿಯು ₹10 ಸಾವಿರ ನಗದು ಒಳಗೊಂಡಿದೆ.

ನಗರ ಪಾಲಿಕೆ ಸದಸ್ಯರಾಗಿ, ಮೇಯರ್ ಆಗಿ ಸೇವೆ ಸಲ್ಲಿಸಿರುವ ಜೆ.ಹುಚ್ಚಪ್ಪನವರು ಕನ್ನಡಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದವರು. ಹಲವು ಪ್ರಮುಖ ಕನ್ನಡ ಕಾರ್ಯಕ್ರಮಗಳನ್ನು ಆಯೋಜಿಸಿರುವ ಅವರು ಕನ್ನಡಪರ ಸಾಧಕರನ್ನು ಗುರುತಿಸುವಲ್ಲಿ ಮುಖ್ಯ ಪಾತ್ರವಹಿಸಿದ್ದರು. ನಾಡು-ನುಡಿಯ ವಿಚಾರಗಳ ಹೋರಾಟಗಳಲ್ಲಿ ಸದಾ ಮುಂದಾಳತ್ವ ವಹಿಸುವ ಅವರು ಸಾಮಾಜಿಕ ಚಳವಳಿಗಳಲ್ಲಿ ಕೂಡ ತಮ್ಮನ್ನು ತೊಡಗಿಸಿಕೊಂಡವರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT